ಕಾಸರಗೋಡು: ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಗುರುವಾರದಿಂದ ನಾಲ್ಕು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಮದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಜನರು ಜಾಗರೂಕರಾಗಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ.ವರೆಗಿನ ಮಳೆ ನಿರೀಕ್ಷಿಸಲಾಗಿದೆ.
ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಗುರುವಾರ ಭಾರೀ ಮಳೆಯಾಗಲಿದ್ದು, 17 ರಂದು ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು, 18 ರಂದು ಇಡುಕ್ಕಿ, ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು,19 ರಂದು ಇಡುಕ್ಕಿ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕನಿಷ್ಠ ಎರಡು ಸ್ಥಳಗಳಲ್ಲಿ ಪ್ರವಾಹ ಅಪಾಯದ ತೀವ್ರ ಮಟ್ಟವನ್ನು ಘೋಷಿಸಲಾಗಿದೆ. ಕಡಲತಡಿಯ ಅಪಾಯದಲ್ಲಿರುವ ಕರಾವಳಿ ನಿವಾಸಿಗಳು ಸಹ ಜಾಗರೂಕರಾಗಿರಬೇಕು ಎಂದು ಎಚ್ಚರಿಕೆ ತಿಳಿಸಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರದಿಂದ ಮಳೆಯಾಗುತ್ತಿದ್ದು ಬುಧವಾರ ತೀವ್ರಗತಿಯ ಮಳೆ ಲಭ್ಯವಾಗಿದೆ.


