ಬದಿಯಡ್ಕ: ಪೆರಡಾಲ ನವಜೀವನ ಶಾಲೆಗೆ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಸೋಮವಾರ ಸ್ಟಾಂಡ್ ಸ್ಯಾನಿಟೈಸರ್ ವ್ಯವಸ್ಥೆಯನ್ನು ಶಾಲೆಗೆ ಕೊಡುಗೆಯಾಗಿ ನೀಡಲಾಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಶ್ರಫ್ ಮುನಿಯೂರು ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಪಿ.ಕೆ. ತಂಗಮಣಿ, ಅಧ್ಯಾಪಕರಾದ ನಿರಂಜನ ರೈ, ರಾಜೇಶ್ ಅಗಲ್ಪಾಡಿ, ವಿಜಯ ಮಾಸ್ತರ್ ಉಪಸ್ಥಿತರಿದ್ದರು.