HEALTH TIPS

ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಆತ್ಮಹತ್ಯೆಗೆ ಯತ್ನ

       
       ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಶ್ರೀಹರನ್ ವೆಲ್ಲೂರ್ ಕಾರಾಗೃಹದಲ್ಲಿ
ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
      ಕಳೆದ 30 ವರ್ಷಗಳ ಜೈಲುವಾಸದ ಸಂದರ್ಭದಲ್ಲಿ ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ . ಇದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವೆಲ್ಲೂರ್ ಜೈಲು ಆಕೆಗೆ ಸುರಕ್ಷಿತವಾಗಿಲ್ಲ, ಆಕೆಯನ್ನು ಪುಝಲ್ ಕಾರಾಗೃಹಕ್ಕೆ ರವಾನಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ನಳಿನಿ ಪರ ವಕೀಲರು ಹೇಳಿದ್ದಾರೆ.ನಳಿನಿ ಪತಿ ಮುರುಗನ್ ಸಹ ಇದೇ ಕಾರಾಗೃಹದಲ್ಲಿದ್ದು, ತನ್ನ ಪತ್ನಿಯನ್ನು ಬೇರೆ ಜೈಲಿಗೆ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ.ಶೀಘ್ರದಲ್ಲಿಯೇ  ಕಾನೂನು ರೀತಿಯ ಇಬ್ಬರ ಮನವಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
      ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಮುರುಗನ್ ಸೇರಿ ಏಳು ಜನರಿಗೆ ವಿಶೇಷ ಟಾಡಾ ನ್ಯಾಯಾಲಯದಿಂದ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries