ಕಾಸರಗೋಡು: ಜನಪರ ಆಂದೋಲನಗಳನ್ನು ಹತ್ತಿಕ್ಕಬಹುದು ಎಂಬುದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಭ್ರಮೆಯಾಗಿದೆ ಎಂದು ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಧನಂಜಯ ಮಧೂರು ಹೇಳಿದರು.
ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆ ನೀಡಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಶನಿವಾರ ಪ್ರತಿಭಟನೆ ನಡೆಸಿದ ಯುವಮೋರ್ಚಾ ರಾಜ್ಯ ಅಧ್ಯಕ್ಷ ಪ್ರಫುಲ್ ಕೃಷ್ಣನ್ ಅವರ ಮೇಲೆ ನಡೆದ ಪೆÇಲೀಸ್ ಹಲ್ಲೆಯನ್ನು ಪ್ರತಿಭಟಿಸಿ ಕಾಸರಗೋಡು ನಗರದಲ್ಲಿ ನಡೆಸಿದ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಮೋರ್ಚಾ ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷ ರಕ್ಷಿತ್ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಕೋಶಾ„ಕಾರಿ ಎನ್.ಜಿತೇಶ್, ಮಂಡಲ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಮೊದಲಾದವರಿದ್ದರು. ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಯಿತು.

