HEALTH TIPS

ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸೇರಿ ಮೂವರ ವಿರುದ್ಧ ಎಫ್ ಐ ಆರ್ ದಾಖಲಿಸಿದ ಎನ್ ಐ ಎ

 
          ಕೊಚ್ಚಿ: ಕೇರಳದ 30 ಕೆ.ಜಿ. ಚಿನ್ನ ಕಳ್ಳಸಾಗಣೆ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐ ಎ)ಗೆ ಸೂಚಿಸಿದ ಮಾರನೇ ದಿನವೇ ಎನ್ ಐ ಎ ಸ್ವಪ್ನಾ ಸುರೇಶ್ ಸೇರಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಿಸಿದೆ.
           ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವಾಲಯ ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತು ತನಿಖೆ ನಡೆಸುವಂತೆ ಎನ್ ಐ ಎಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಎನ್ ಐ ಎ ಚಿನ್ನ ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸರಿತ್ ಕುಮಾರ್ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರ ವಿರುದ್ಧ ಇಂದು ಎಫ್ ಐ ಆರ್ ದಾಖಲಿಸಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಉಗ್ರ ಕೃತ್ಯಗಳೊಂದಿಗೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸಲು ಎನ್ ಐ ಎ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ವಿವಿಧ ಸೆಕ್ಷನ್ ಗಳಡಿ ಎಫ್ ಐ ಆರ್ ದಾಖಲಿಸಿದೆ. ಆರೋಪಿಗಳು ಭಯೋತ್ಪಾದಕ ಕೃತ್ಯಗಳಿಗೆ ಹಣ ಸಂಗ್ರಹಿಸುವುದು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಸಂಚು ರೂಪಿಸಿರುವ ಬಗ್ಗೆ ಎನ್ ಐ ಎ ತನಿಖೆ ನಡೆಸಲಿದೆ.
          ಸಂಘಟಿತ ಕಳ್ಳಸಾಗಣೆ ಕಾರ್ಯಾಚರಣೆಯು ರಾಷ್ಟ್ರೀಯ ಭದ್ರತೆಗೆ ಗಂಭೀರ ಪರಿಣಾಮಗಳನ್ನು ಬೀರಬಹುದು. ಹಾಗಾಗಿ, ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ನಡೆದ ಚಿನ್ನದ ಕಳ್ಳ ಸಾಗಾಣಿಕೆ ಪ್ರಕರಣದ ತನಿಖೆಯನ್ನು ಎನ್ ಐ ಎಗೆ ವಹಿಸಲಾಗಿದೆ ಎಂದು ನಿನ್ನೆ ಕೇಂದ್ರ ಗೃಹಸಚಿವಾಲಯದ ವಕ್ತಾರರು ತಿಳಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries