ಕಾಸರಗೋಡು: ಕರ್ನಾಟಕ ಮೆಡಿಕಲ್, ಇಂಜಿನಿಯರಿಂಗ್ ಪ್ರವೇಶಾತಿ (ಕಿಂಸ್) ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತೆ ಪ್ರತ್ಯೇಕ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯ ಒದಗಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು.
ಜು.30,31ರಂದು ಈ ಪರೀಕ್ಷೆಗಳು ನಡೆಯಲಿದ್ದು, ಕಾಞಂಗಾಡಿನಿಂದಲೂ, ಕಾಸರಗೋಡಿನಿಂದಲೂ ತಲಪ್ಪಾಡಿ ಗಡಿಪ್ರದೇಶ ವರೆಗೆ ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಸಂಚಾರ ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತೆಯೊಂದಿಗೆ ನಡೆಸಿದ ಮಾತುಕತೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆ.1ರಂದು ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸರಕಾರ ವಾಹನ ಸೌಲಭ್ಯ ಒದಗಿಸಿದರೆ ಅಂದೂ ಕಾಸರಗೋಡು ಜಿಲ್ಲಾಡಳಿತೆ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯ ಒದಗಿಸಲಿದೆ ಎಂದವರು ನುಡಿದರು.
ಪರೀಕ್ಷೆಗೆ ಹಾಜರಾಗಿ ಮರಳುವ ವೇಳೆ ವಿದ್ಯಾರ್ಥಿಗಳು ಕಡ್ಡಾಯವಾಗಿ 14 ದಿನ ರೂಂ ಕ್ವಾರೆಂಟೈನ್ ನಡೆಸಬೇಕು. ವಿದ್ಯಾರ್ಥಿಗಳೊಂದಿಗೆ ಪರೀಕ್ಷೆಗೆ ಜತೆಯಾಗಿ ತೆರಳಲು ಅನುಮತಿ ಪಡೆದಿರುವ ಪೆÇೀಷಕರೂ 14 ದಿನಗಳ ರೂಂ ಕ್ವಾರೆಂಟೈನ್ ಪಾಲಿಸಬೇಕು. ಖಾಸಗಿ ವಾನಗಳಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳುವುದಿದ್ದಲ್ಲಿ ಅಭ್ಯಂತರವಿರುವುದಿಲ್ಲ. ಆದರೆ ಪರೀಕ್ಷೆಗೆ ಹಾಜರಾಗಿ ಮರಳಿ ಬರುವ ವೇಳೆ ಕೋವಿಡ್ 19 ಜಾಗ್ರತಾ ಪೆÇೀರ್ಟಲ್ ನಲ್ಲಿ ನೋಂದಣಿ ನಡೆಸಿರಬೇಕು. ಇವರಿಗೂ 14 ದಿನಗಳ ರೂಂ ಕ್ವಾರೆಂಟೈನ್ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.


