ಅಜ್ಞಾನ ತಿಮಿರಾಂಧವ್ಯ ಜ್ಞಾನಾಂಜನ ಶಲಾಕಾಯ| ಚಕ್ಷುರುನ್ಮಿಲಿತಂ ಯೇನ್ ತಸ್ಮ್ಯೆಶ್ರೀಗುರವೇ ನಮಃ||ಎಂದು ಗುರುವಿನ ಮಹತ್ವದ ಗುರುತ್ವವನ್ನು ಜಗತ್ತಿಗೇ ತಿಳಿಸಿದ ಭಾರತೀಯ ಪರಂಪರೆಯಲ್ಲಿ ಗುರುವಿನ ಸ್ಥಾನ ಅತ್ಯಪೂರ್ವವಾದುದಾಗಿದೆ. ಬದುಕಿನ ಗುರಿಯ ನಾವಿಕನಾಗಿ ಒಂದರ್ಥದಲ್ಲಿ ಗುರುವೇ ವ್ಯಕ್ತಿಯ ನಿರೂಪಕ; ವ್ಯಕ್ತಿತ್ವದ ನಾವಿಕ. ಗುರು ಎಂದರೆ ಬ್ರಹ್ಮ, ಗುರು ಎಂದರೆ ವಿಷ್ಣು ಮತ್ತು ಗುರು ಎಂದರೆ ಮಹೇಶ್ವರನೂ ಕೂಡ! ಶಿಕ್ಷಣ ಮನುಜನಿಗೆ ಬದುಕಿನ ಗುರಿ, ಅದರೆಡೆಗೆ ಜ್ಞಾನವನ್ನು ನೀಡುತ್ತದೆ. ಗುರು ಎಂಬ ಪದದಲ್ಲಿ "ಗು" ಎಂದರೆ ನೆರಳು, "ರು" ಎಂದರೆ ಚದುರಿಸುವುದು ಎಂದರ್ಥ.ಯಾರು ಅಜ್ಞಾನ ಅಂಧಕಾರವನ್ನು ಹೋಗಲಾಡಿಸುವ ಶಕ್ತಿಯನ್ನು ಹೊಂದಿರುವರೋ ಅವರು ಗುರು. ಅಂತಹ ಗುರು ಜಗತ್ತನ್ನು ಬೆಳಗಲು ನೆರವಾಗುತ್ತಾನೆ.
ನಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನ ಗುರುವಿನದ್ದಾಗಿದೆ. ನಮ್ಮ ಭವಿಷ್ಯವನ್ನು ರೂಪಿಸಿ ನಮ್ಮನ್ನು ವಿದ್ಯಾವಂತರು ಬುದ್ಧಿವಂತರನ್ನಾಗಿ ಮಾಡುವ ಕಲೆ ನಮ್ಮ ಗುರಗಳದ್ದಾಗಿದೆ. ಹಸಿಮಣ್ಣಿಗೆ ಆಕಾರ ಕೊಡುವ ಗುರು ಎಂಬ ಮಾರ್ಗದರ್ಶಿ ತಂದೆ ತಾಯಿಯ ಸ್ಥಾನಕ್ಕೆ ಸಮಾನರು. ಜ್ಞಾನ ಎಂಬ ಬೆಳಕಿನೆಡೆಗೆ ನಮ್ಮನ್ನು ಕೊಂಡೊಯ್ಯುವ ಈ ಮಹಾನುಭಾವರಾದ ಗುರುಗಳು ನಮ್ಮ ಜೀವನದ ದಿಕ್ಕನ್ನು ಬದಲಾಯಿಸುವವರಲ್ಲಿ ಪ್ರಮುಖರಾಗಿದ್ದಾರೆ.
ಹಿಂದೂ ಕ್ಯಾಲೆಂಡರ್‍ನಲ್ಲಿ ಗುರು ಪೂರ್ಣಿಮೆಯನ್ನು ನಮ್ಮ ಆಧ್ಯಾತ್ಮಿಕ ಮತ್ತು ಶೈಕ್ಷಣಿಕ ಗುರುಗಳಿಗೆ ಅರ್ಪಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಗುರು ಅಥವಾ ಶಿಕ್ಷಕರನ್ನು ದೇವರಿಗೆ ಹೋಲಿಸಲಾಗುತ್ತದೆ. ನಿಜವಾದ ಗುರುವು ವ್ಯಕ್ತಿ ಮತ್ತು ಮಹಾನ್ ಶಕ್ತಿಗೆ ಒಂದು ಸಂಪರ್ಕ ಅಥವಾ ಕೊಂಡಿ ಇದ್ದಂತೆ. ಆದ್ದರಿಂದಲೇ ಗುರು ಪೂರ್ಣಿಮೆಯಂದು ಗುರುಗಳಿಗೆ ಶಿಕ್ಷಕರಿಗೆ ಗೌರವ ತೋರುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.
ನಿಮ್ಮನ್ನು ಶಿಕ್ಷಣದ ಮೂಲಕ ಉತ್ತಮ ಜೀವನಕ್ಕೆ ಕಾಲಿರಿಸುವಂತೆ ಮಾಡಿದ ಗುರುಗಳಿಗೆ ಈ ದಿನವನ್ನು ಅರ್ಪಿಸಬೇಕು. ಹಿಂದೂ ತಿಂಗಳ ಆಷಾಢ ಮಾಸ (ಜುಲೈ -ಆಗಸ್ಟ್) ದಂದು ಪೂರ್ಣ ಚಂದ್ರನ ದಿನದಂದು ಗುರುವಿಗೆ ವಿಶೇಷ ಗೌರವ ಸಲ್ಲಿಸುವ ದಿನವನ್ನಾಗಿ ಆಚರಿಸಲಾಗುತ್ತದೆ.
ವ್ಯಾಸರ ನೆನಪಿಗಾಗಿ ಈ ದಿವವನ್ನು ಆಚರಿಸಲಾಗುತ್ತದೆ. ನಾಲ್ಕು ವೇದಗಳನ್ನು, 18 ಪುರಾಣಗಳನ್ನು ಮಹಾಭಾರತ ಮತ್ತು ಶ್ರೀಮದ್ಭಾಗವತವನ್ನು ರಚಿಸಿದ ಮಹಾತ್ಮರಾಗಿದ್ದಾರೆ ವೇದವ್ಯಾಸರು. ಆಷಾಢ ಮಾಸದ ಶುಕ್ಲ ಪಕ್ಷದ ಹುಣ್ಣಿಮೆ(ಅಂದರೆ ಇಂದು) ಯ ದಿನವನ್ನು ವ್ಯಾಸ ಪೌರ್ಣಮಿ ಅಥವಾ ಗುರು ಪೂರ್ಣಿಮೆಯೆಂದು ನಮ್ಮ ಪರಂಪರೆ ಗುರುತಿಸಿ ಆಚರಿಸಿಕೊಂಡು ಬರುತ್ತಿದೆ.
ಬೌದ್ಧರಿಗೂ ಗುರು ಪೂರ್ಣಿಮೆ ಮಹತ್ವದ ದಿನವಾಗಿದೆ. ಸಾಂಪ್ರದಾಯಿಕವಾಗಿ ಬೌದ್ಧರು ಬುದ್ಧನಿಗೆ ಗೌರವ ಅರ್ಪಿಸುವ ದಿನವನ್ನಾಗಿ ಗುರುಪೂರ್ಣಿಮೆಯನ್ನು ಆಚರಿಸುತ್ತಾರೆ. ಸಾರನಾಥದಲ್ಲಿ ಪ್ರಥಮ ಉಪದೇಶವನ್ನು ಬುದ್ಧನು ಈ ದಿನ ಮಾಡಿದರೆಂದು ಪ್ರತೀತಿ ಇದೆ.
ಗುರು ಪೂರ್ಣಿಮೆಯ ಆಚಾರಗಳು:
ಹಿಂದೂ ಆಧ್ಯಾತ್ಮಿಕ ಗುರುಗಳನ್ನು ಅವರ ಜೀವನ ಮತ್ತು ಕಲಿಸುವಿಕೆಗಳನ್ನು ಸ್ಮರಿಸಿಕೊಂಡು ಅವರಿಗೆ ಈ ದಿನ ಗೌರವ ಸಲ್ಲಿಸಲಾಗುತ್ತದೆ. ಹಲವಾರು ದೇವಸ್ಥಾನಗಳಲ್ಲಿ ವ್ಯಾಸ ಪೂಜೆಯನ್ನು ನೆರವೇರಿಸಲಾಗುತ್ತದೆ.
ಹೂವು ಮತ್ತು ಕೆಲವೊಂದು ಉಡುಗೊರೆಗಳನ್ನು ಅವರ ಗೌರವಕ್ಕಾಗಿ ಈ ದಿನ ಅರ್ಪಿಸಲಾಗುತ್ತದೆ. ಅನುಯಾಯಿಗಳಿಗಾಗಿ ಪ್ರಸಾದ ರೂಪದಲ್ಲಿ ಹಬ್ಬವನ್ನು ಆಚರಿಸುವವರು ಈ ದಿನವನ್ನು ಆಚರಿಸುತ್ತಾರೆ. ಅಂದರೆ ಅನುಯಾಯಿಗಳಿಗೆ ಪ್ರಸಾದ ಮತ್ತು ಫಲ ಪುಷ್ಪಗಳನ್ನು ಅರ್ಪಿಸುವುದಾಗಿದೆ.
ಗುರುಗಳ ಪಾದಗಳನ್ನು ತೊಳೆಯುವುದು ಗುರುವಿನ ಕೃಪೆ ಕರುಣೆ ನಮ್ಮ ಮೇಲೆ ಯಾವಾಗಲೂ ಇರುತ್ತದೆ ಎಂಬುದನ್ನು ತೋರಿಸುವ ದ್ಯೋತಕವಾಗಿದೆ. ಬೌದ್ಧ ಭಿಕ್ಷುಗಳು ಈ ದಿನದಂದು ಯೋಗವನ್ನು ಮಾಡುತ್ತಾರೆ ಇದರಿಂದಾಗಿಯೇ ಅರಿಷಡ್ವರ್ಗಗಳ ವಿರುದ್ಧ ಅವರಿಗೆ ಹೋರಾಡಲು ಸಾಧ್ಯವಾಗಿರುವುದು.
ಗುರುಪೂರ್ಣಿಮೆಯ ಮಹತ್ವ:
ಹಿಂದೂ ಪರಂಪರೆಯಲ್ಲಿ ಗುರುಪೂರ್ಣಿಮೆಯಂದು ಚಾತುರ್ಮಾಸ ಆರಂಭವಾಗುತ್ತದೆ. ರೈತರಿಗೆ ಈ ದಿನ ಅತ್ಯಂತ ಮಹತ್ವದ್ದಾಗಿದೆ. ಮಳೆಗಾಲದ ಪ್ರಾರಂಭವನ್ನು ಸೂಚಿಸುವ ಗುರುಪೂರ್ಣಿಮೆ ದವಸ ಧಾನ್ಯಗಳ ಬೆಳೆಯುವಿಕೆ ಅತೀ ಮುಖ್ಯವಾದ ಸಮಯವಾಗಿದೆ.
ಬೇಸಿಗೆಯ ತಾಪದಿಂದ ತಂಪಿನ ಅನುಭೂತಿಯನ್ನು ನಮಗೆ ನೀಡುವ ಮಾನ್‍ಸೂನ್ ಅಥವಾ ಮಳೆಗಾಲ ನಿಮ್ಮ ಆಧ್ಯಾತ್ಮಿಕ ಪಾಠಗಳನ್ನು ಪ್ರಾರಂಭಿಸಲು ಮುಖ್ಯವಾದ ದಿನಗಳಾಗಿವೆ. ಆದ್ದರಿಂದ ಗುರುಪೂರ್ಣಿಮೆಯಂದು ಸ್ವಲ್ಪ ಹೊತ್ತನ್ನು ಗುರುವಿಗಾಗಿ ಮೀಸಲಿಟ್ಟು ನಿಮ್ಮನ್ನು ಜ್ಞಾನದ ಕಡೆಗೆ ಕೊಂಡೊಯ್ದ ಆ ಮಹಾನ್ ಚೇತನಕ್ಕೆ ನಮಸ್ಕರಿಸೋಣ.
ಶ್ರೀಗುರುಭ್ಯೋ ನಮಃ-ಹರಿಃ ಓಂ.