HEALTH TIPS

ಜಿಲ್ಲಾ ಬಿಜೆಪಿಯ ನೂತನ ಕಾರ್ಯಾಲಯ ಉದ್ಘಾಟನೆ

   
       ಕಾಸರಗೋಡು: ಅತ್ಯಾಧುನಿಕ ಸೌಕರ್ಯಗಳಿಂದ ಕೂಡಿದ ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯಾಲಯ ಭಾನುವಾರ  ಉದ್ಘಾಟನೆಗೊಂಡಿತು. 
        ತಾಳಿಪಡ್ಪು ಶ್ರೀ ನಾರಾಯಣ ಗುರು ರಸ್ತೆಯಲ್ಲಿ ಆರ್‍ಎಸ್‍ಎಸ್ ಕಾರ್ಯಾಲಯದ ಮುಂಭಾಗದಲ್ಲಿ ನಿರ್ಮಿಸಿದ ಕಟ್ಟಡವನ್ನು ವರ್ಚುವಲ್ ಮೀಟ್ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಉದ್ಘಾಟಿಸಿದರು.
      ಕೇಂದ್ರ ಸಚಿವ ವಿ.ಮುರಳೀಧರನ್, ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್, ಮುಖಂಡರಾದ ಸಿ.ಕೆ.ಪದ್ಮನಾಭನ್, ಪಿ.ಕೆ.ಕೃಷ್ಣದಾಸ್ ಮೊದಲಾದವರು ಉಪಸ್ಥಿತರಿದ್ದು ಮಾತನಾಡಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ಅವರು ಅಧ್ಯಕ್ಷತೆ ವಹಿಸಿದರು. 
        ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಸಮಿತಿ ಸದಸ್ಯ ಎಂ.ಸಂಜೀವ ಶೆಟ್ಟಿ, ರಾಜ್ಯ ಸಮಿತಿ ಸದಸ್ಯ ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಲಾಯುಧನ್, ಆರ್‍ಎಸ್‍ಎಸ್ ಮಂಗಳೂರು ವಿಭಾಗ ಸಂಘಚಾಲಕ್ ಗೋಪಾಲ ಚೆಟ್ಟಿಯಾರ್ ಮೊದಲಾದವರು ಉಪಸ್ಥಿತರಿದ್ದರು.
       ಬಿಜೆಪಿ ಕಾಸರಗೋಡು ಜಿಲ್ಲಾ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ ವಂದಿಸಿದರು.
       ಕಾರ್ಯಾಲಯದಲ್ಲಿ ಕನ್ನಡ, ಮಲಯಾಳ, ಇಂಗ್ಲೀಷ್ ಭಾಷೆಯ ಗ್ರಂಥಗಳ ಭಂಡಾರ ಇದೆ. ಕಾರ್ಯಾಲಯ ಕಾರ್ಯದರ್ಶಿ, ಪದಾಧಿಕಾರಿಗಳು, ವಿವಿಧ ಮೋರ್ಚಾಗಳಿಗೂ ವಿಶೇಷ ಸೌಕರ್ಯಗಳಿವೆ. ವಿಶಾಲವಾದ ಕಾನ್ಪರೆನ್ಸ್ ಹಾಲ್, ಮುಖಂಡರಿಗೆ ಉಳಕೊಳ್ಳಲು ಎರಡು ಕೊಠಡಿಗಳ ಸಹಿತ ವಿವಿಧ ಸೌಕರ್ಯಗಳನ್ನು ಸಜ್ಜುಗೊಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries