ತಿರುವನಂತಪುರಂ: ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮೇಲೆ ದಾಳಿ ತೀವ್ರಗೊಳಿಸುವ ಭಾಗವಾಗಿ, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಯುಡಿಎಫ್ ಮುಂದಾಗಿದೆ. ಕಾಂಗ್ರೆಸ್ ಶಾಸಕ ವಿ.ಡಿ.ಸತೀಶನ್ ಅವರು ನಿಯಮ 63 ರ ಅಡಿಯಲ್ಲಿ ವಿಧಾನಸಭೆ ಕಾರ್ಯದರ್ಶಿಗೆ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.
ಈ ಮಧ್ಯೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಲಾಗಿರುವ ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಅವರನ್ನು ಉಚ್ಚಾಟಿಸುವಂತೆ ಪ್ರತಿಪಕ್ಷಗಳು ಒತ್ತಾಯಿಸಿವೆ. ರಾಜತಾಂತ್ರಿಕ ಸಾಮಗ್ರಿಗಳನ್ನು ಬಳಸಿಕೊಂಡು ತಿರುವನಂತಪುರಂ ವಿಮಾನ ನಿಲ್ದಾಣದ ಮೂಲಕ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿಗಳು ರಾಜ್ಯಾಡಳಿತ ಚುಕ್ಕಾಣಿ ಹಿಡಿದಿರುವ ಎಲ್ ಡಿ ಎಫ್ ನ ಹಲವು ಮಂತ್ರಿಗಳೊಂದಿಗೆ ವೈಯಕ್ತಿಕ ಸಂಬಂಧ ಹೊಂದಿದ್ದಾರೆ ಎಂದು ನೋಟಿಸ್‍ನಲ್ಲಿ ತಿಳಿಸಲಾಗಿದೆ. ಜೊತೆಗೆ ಪಿ.ಶ್ರೀರಾಮಕೃಷ್ಣನ್ ಅವರು ಸ್ಪೀಕರ್ ಸ್ಥಾನದ ಘನತೆಯನ್ನು ಕಾಪಾಡಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ಅವರನ್ನು ಸ್ಪೀಕರ್ ಹುದ್ದೆಯಿಂದ ತೆಗೆದುಹಾಕಬೇಕೆ ಎಂದು ಸದನವು ನಿರ್ಧರಿಸಬೇಕು ಎಂದು ಅವರು ವಿಧಾನಸಭಾ ಕಾರ್ಯದರ್ಶಿಗೆ ನೀಡಿದ ನೋಟಿಸ್‍ನಲ್ಲಿ ತಿಳಿಸಿದ್ದಾರೆ.
ಜು. 27 ರಂದು ವಿಧಾನಸಭೆಯನ್ನು ಕರೆಯಲು ಸಂಪುಟ ನಿರ್ಧರಿಸಿದೆ. ವಿಶೇಷ ವಿಧಾನಸಭೆ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ನಿರ್ಧರಿಸಿತು. ಈ ತಿಂಗಳ 30 ರಂದು ಕಳೆದ ಏಪ್ರಿಲ್ 1 ರಿಂದ ಜಾರಿಗೆ ಬಂದ ಹಣಕಾಸು ಮಸೂದೆಯನ್ನು ಅಂಗೀಕರಿಸಲು ವಿಶೇಷ ವಿಧಾನಸಭೆ ಅಧಿವೇಶನ ಸಭೆ ನಡೆಯಲಿದೆ.