ತಿರುವನಂತಪುರ: ಕೇರಳದ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಮನಿ ಲಾಂಡ್ರಿಂಗ್ ಕಂಡು ಬಂದಿದೆ ಎಂದು ಜಾರಿ ನಿರ್ದೇಶನಾಲಯವು ದೂರು ದಾಖಲಿಸಿದ್ದು, ಆರೋಪಿಗಳ ವಿಚಾರಣೆಗಾಗಿ ಮನವಿ ಸಲ್ಲಿಸಿದೆ.
ಚಿನ್ನದ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿಗಳ ಮೇಲೆ ಮನಿಲಾಂಡ್ರಿಂಗ್ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸಲಿದೆ. ಈ ಪ್ರಕರಣದಲ್ಲಿ ಈವರೆಗೆ ತಿರುವನಂತಪುರದ ರಾಜತಾಂತ್ರಿಕ ಕಚೇರಿಯ ಪಿಆರ್‍ಒ ಪಿ.ಎಸ್. ಸರಿತ್ ಕುಮಾರ್ ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ. ಈತನಿಗೆ ಹವಾಲಾ ಗ್ಯಾಂಗ್ ಪರಿಚಯವಿದ್ದು, ಸ್ವಪ್ನ ಸುರೇಶ್ ಮೂಲಕ ಕಳ್ಳ ಸಾಗಣೆ ನಡೆಸಿದ್ದರು ಎಂದು ತಿಳಿದು ಬಂದಿದೆ. ಹವಾಲ ತಂಡದ ಬಗ್ಗೆ ಮಾತುಗಳು ಕೇಳಿಬಂದಿರುವುದರಿಂದ ಶೀಘ್ರದಲ್ಲೇ ಈ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ಕೈಗೆತ್ತಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದರು.
ದುಬೈನಲ್ಲಿರುವ ಉದ್ಯಮಿ ಫೈಜಲ್ ಫರೀದ್ ದುಬೈನಲ್ಲಿ ಚಿನ್ನ ಖರೀದಿಸಿ ಕೇರಳದ ಕಾನ್ಸುಲೇಟ್ ಕಚೇರಿಗೆ ಕಳುಹಿಸುತ್ತಿದ್ದ. ಇಲ್ಲಿ ಸ್ವಪ್ನ ಸುರೇಶ್, ಸರೀತ್ ಅದನ್ನು ಹವಾಲ ಗ್ಯಾಂಗಿಗೆ ಹಂಚುತ್ತಿದ್ದರು. ಕೇರಳದ ಹೊರಗಡೆ ಎಲ್ಲವೂ ಮಾರಾಟವಾಗುತ್ತಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ.
ಸರೀತ್ ಕುಮಾರ್ ನಿಂದ ಪಡೆದ ಚಿನ್ನವನ್ನು ಸಂದೀಪ್ ನಾಯರ್ ಪಡೆದುಕೊಂಡು ಮಲಪ್ಪುರಂ ನ ಕೆ.ಟಿ ರಮೀಸ್ ಗೆ ತಲುಪಿಸುತ್ತಿದ್ದ. ಸದ್ಯ ರಮೀಶ್ ಕಸ್ಟಮ್ ಅಧಿಕಾರಿಗಳ ವಶದಲ್ಲಿದ್ದಾನೆ. ರಮೀಸ್ ಈ ಬ್ಯಾಗೇಜನ್ನು ಮೂವಾಟ್ಟಿಪುಳದ ಪಿ.ಟಿ ಅಬ್ದು, ಮೊಹಮ್ಮದ್ ಶಫಿ, ಎಡಕಂದನ್ ಸೈಥಾಲವಿ, ಜಲಾಲ್ ಮೊಹಮ್ಮದ್ ಗೆ ತಲುಪಿಸುತ್ತಿದ್ದ. ಇವರಿಂದ ಹವಾಲ ಆಪರೇಟರ್ ಗಳು ಇದನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ. ಇತ್ತೀಚಿನ ಹವಾಲಾ ಹಣವನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಅಬ್ದುಗೆ ತಲುಪಿದ 78 ಕೆಜಿ ಚಿನ್ನ ಇನ್ನೂ ಪತ್ತೆಯಾಗಿಲ್ಲ.