ಸಮರಸ ಚಿತ್ರ ಸುದ್ದಿ: ಕಾಸರಗೋಡು: ಕಾಸರಗೋಡು-ಕಾಞಂಗಾಡು ಕೆಎಸ್‍ಟಿಪಿ ರಸ್ತೆಯ ಅವೈಜ್ಞಾನಿಕ ನಿರ್ಮಾಣದಿಂದ ಹೆಚ್ಚುತ್ತಿರುವ ಅಪಘಾತ ಸ್ಥಳಗಳಲ್ಲಿ ಒಂದಾದ ತೃಕ್ಕನ್ನಾಡ್ ಜಂಕ್ಷನ್‍ನಲ್ಲಿ ಬಿಜೆಪಿ ವತಿಯಿಂದ ರಸ್ತೆಬದಿ ಅಳವಡಿಸಲಾದ ಸುರಕ್ಷಾ ಕನ್ನಡಿಯನ್ನು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಉದ್ಘಾಟಿಸಿದರು.