HEALTH TIPS

ಕೋವಿಡ್-19: ಒಂದೇ ದಿನ 60,963 ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 23.2 ಲಕ್ಷ, 46,091 ಮಂದಿ ಸಾವು

     ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 60,963 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,29,639ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ. 

         ಕಳೆದ 24 ಗಂಟೆಗಳಲ್ಲಿ 834 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 46091ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

    ಇದೇ ವೇಳೆ 23,29,639 ಮಂದಿ ಸೋಂಕಿತರ ಪೈಕಿ 1639600 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 643948 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

      ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 7,33,439 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

     ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 7,33,439 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 11ರವರೆಗೂ 2.60 ಕೋಟಿ ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries