ಕಾಸರಗೋಡು: ತುಳು ಭಾಷೆ-ಸಂಸ್ಕೃತಿಗೆ ಪೆÇ್ರೀತ್ಸಾಹ ಒದಗಿಸುವ ಮಹದುದ್ದೇಶದೊಂದಿಗೆ ಮಂಜೇಶ್ವರ ತಾಲೂಕಿನ ಹೊಸಂಗಡಿ ಬಳಿಯ ಕಡಂಬಾರು ಗ್ರಾಮದ ದುರ್ಗಿಪಳ್ಳದಲ್ಲಿ ನಿರ್ಮಾಣಗೊಂಡಿರುವ ಕೇರಳ ತುಳು ಅಕಾಡೆಮಿ ಸೆ.3ರಂದು ಲೋಕಾರ್ಪಣೆಗೊಳ್ಳಲಿದೆ.
ಅಂದು ಬೆಳಗ್ಗೆ 11.30ಕ್ಕೆ ಸಂಸ್ಕೃತಿ ಸಚಿವ ಎ.ಕೆ.ಬಾಲನ್ ಆನ್ ಲೈನ್ ಆಗಿ ಉದ್ಘಾಟನೆ ನಡೆಸುವರು. ಕಂದಾಯ ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿರುವರು. ಶಾಸಕ ಎಂ.ಸಿ.ಕಮರುದ್ದೀನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಬ್ಲಾಕ್-ಗ್ರಾಮ ಪಂಚಾಯತ್ ಪ್ರತಿನಿಧಿಗಳು, ಸಾಂಸ್ಕೃತಿಕ ಕಾರ್ಯಕರ್ತರು ಭಾಗವಹಿಸುವರು.
ಸಮರಂಭ ಅಂಗವಾಗಿ ಕೇರಳ ತುಳು ಅಕಾಡೆಮಿ ಸ್ಥಾಪಕಧ್ಯಕ್ಷರಾಗಿದ್ದ ಡಾ.ವೆಂಕಟರಾಜ ಪುಣಿಂಚತ್ತಾಯ ಅವರ ನಾಮಧೇಯದಲ್ಲಿರುವ ಗ್ರಂಥಾಲಯ ಉದ್ಘಾಟನೆಗೊಳ್ಳಲಿದೆ. ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಮತ್ತು ಸಾರ್ವಜನಿಕರಿಗೆ ತುಳು ಲಿಪಿ ಕಲಿಕೆಗೆ ಪೂರಕವಾಗಿರುವ ಪಠ್ಯಪದ್ಧತಿಗೂ ಶುಭಚಾಲನೆ ಲಭಿಸಲಿದೆ. ತುಳು ತ್ರೈಮಾಸ ಪತ್ರಿಕೆ ತೆಂಬೆರೆಯ ವಿಶೇಷ ಸಂಚಿಕೆ ಬಿಡುಗಡೆಗೊಳ್ಳಲಿದೆ. ಕೋವಿಡ್ ಪ್ರತಿರೋಧ ಸಂಹಿತೆ ಪಾಲನೆಯೊಂದಿಗೆ ಈ ಸಮಾರಂಭ ಜರಗಲಿದೆ.


