HEALTH TIPS

ಅಧಿವೇಶನ ಆರಂಭವಾಗುವ 72 ಗಂಟೆಗಳ ಮುನ್ನ ಎಲ್ಲಾ ಸಂಸದರು ಕೊವಿಡ್ ಟೆಸ್ಟ್ ಮಾಡಿಸಿ: ಲೋಕಸಭಾ ಸ್ಪೀಕರ್

       ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾಗು ಕನಿಷ್ಠ 72 ಗಂಟೆಗಳ ಮುನ್ನ ಎಲ್ಲಾ ಸಂಸದರು ಕೊರೋನಾ ಟೆಸ್ಟ್ ಮಾಡಿಸಬೇಕು ಎಂದು ಲೋಕಸಭಾ ಸ್ಪೀಕರ್  ಓಂ ಬಿರ್ಲಾ ಅವರು ಶುಕ್ರವಾರ ಮನವಿ ಮಾಡಿದ್ದಾರೆ.

      ಮುಂಗಾರು ಅಧಿವೇಶನವು ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗಿ ಅಕ್ಟೋಬರ್ 1 ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ.

     ಸಂಸದರಲ್ಲದೆ, ಸಚಿವಾಲಯಗಳ ಅಧಿಕಾರಿಗಳು, ಮಾಧ್ಯಮಗಳ ಪ್ರತಿನಿಧಿಗಳು ಮತ್ತು ಲೋಕಸಭೆ ಮತ್ತು ರಾಜ್ಯಸಭಾ ಕಾರ್ಯದರ್ಶಿಗಳ ಸಿಬ್ಬಂದಿ ಸೇರಿದಂತೆ ಸಂಸತ್ತಿನ ಆವರಣ ಪ್ರವೇಶಿಸುವ ನಿರೀಕ್ಷೆಯಿರುವವರೆಲ್ಲರೂ ಅಧಿವೇಶನ ಪ್ರಾರಂಭವಾಗುವ ಮೊದಲು ಕೊವಿಡ್ ಪರೀಕ್ಷೆಗೆ ಒಳಗಾಗಬೇಕು ಎಂದು ಬಿರ್ಲಾ ಹೇಳಿದ್ದಾರೆ.

     ಕೊವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅಧಿವೇಶನದ ವ್ಯವಸ್ಥೆಗಳನ್ನು ಅಂತಿಮಗೊಳಿಸಲು ಲೋಕಸಭಾ ಸ್ಪೀಕರ್ ಶುಕ್ರವಾರ ಆರೋಗ್ಯ ಸಚಿವಾಲಯ, ಐಸಿಎಂಆರ್, ಏಮ್ಸ್, ಡಿಆರ್ಡಿಒ ಮತ್ತು ದೆಹಲಿ ಸರ್ಕಾರದ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದರು.

     ಅಧಿವೇಶನದ ವೇಳೆ ಶೂನ್ಯ-ಸ್ಪರ್ಶ ಭದ್ರತಾ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಸಭೆಯ ಬಳಿಕ ಬಿರ್ಲಾ ತಿಳಿಸಿದ್ದಾರೆ.



    ಕಾಮೆಂಟ್‌‌ ಪೋಸ್ಟ್‌ ಮಾಡಿ

    0 ಕಾಮೆಂಟ್‌ಗಳು
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

    Below Post Ad

    https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

    HOTEL

    HOTEL
    CENTURY
    Qries