ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸಂಬಂಧ ಮರಣ ಸಂಖ್ಯೆ ಅಧಿಕೊಳ್ಳುತ್ತಿದೆ. ಸಾರ್ವಜನಿಕರು ಯಾವ ಕಾರಣಕ್ಕೂ ಜಾಗರೂಕತೆ ಕೈಬಿಡಕೂಡದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು.
ಬುಧವಾರ 40 ವರ್ಷದ ವ್ಯಕ್ತಿಯೊಬ್ಬರು ಮರಣಹೊಂದಿದ್ದು, ಇವರಿಗೆ ಯಾವುದೇ ರೋಗಲಕ್ಷಣಗಳಿರಲಿಲ್ಲ ಎಂಬುದು ಗಂಭೀರ ಸಮಸ್ಯೆಯಾಗಿದೆ. ಜನ ಜಿಲ್ಲಾಡಳಿತೆ ತಿಳಿಸಿರುವ ಎಲ್ಲ ಕಟ್ಟುನಿಟ್ಟುಗಳನ್ನೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಆಗ್ರಹಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾಸರಗೋಡು ಜಿಲ್ಲಾ ಮಟ್ಟದ ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.


