HEALTH TIPS

ಭಾರತ, ಚೀನಾ ನಡುವಿನ ಸಮಸ್ಯೆಗಳು ತ್ವರಿತವಾಗಿ ಪರಿಹಾರ-ವಿದೇಶಾಂಗ ಸಚಿವಾಲಯ

       ನವದೆಹಲಿ: ಎರಡು ಹಿಮಾಲಯ ಪ್ರಾಂತ್ಯದ ರಾಷ್ಟ್ರಗಳ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆ,ಭಾರತ ಮತ್ತು ಚೀನಾ ಮಧ್ಯೆ ಇರುವ ಸಮಸ್ಯೆಗಳನ್ನು ತ್ವರಿತ ಗತಿಯಲ್ಲಿ ಬಗೆಹರಿಸಿಕೊಳ್ಳಲು ಉಭಯ ರಾಷ್ಟ್ರಗಳು ಒಪ್ಪಿವೆ. 

      ಭಾರತ-ಚೀನಾ ಗಡಿ ವ್ಯವಹಾರಗಳ ಸಮಾಲೋಚನೆ ಮತ್ತು ಸಮನ್ವಯ ಕಾರ್ಯ ಕಾರ್ಯವಿಧಾನದ 18ನೇ ಸಭೆಯಲ್ಲಿ ಗಡಿ ಪ್ರದೇಶಗಳಲ್ಲಿ ಶಾಂತಿ ಮರು ಸ್ಥಾಪನೆಯುವ ದ್ವಿಪಕ್ಷೀಯ ಸಂಬಂಧಗಳ ಸಮಗ್ರ ಬೆಳವಣಿಗೆಗೆ ಅಗತ್ಯವೆಂದು ಪ್ರತಿಪಾದಿಸಲಾಯಿತು.

     ವಾರದ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾತನಾಡಿ,  ಭಾರತ-ಚೀನಾ ಗಡಿ ಪ್ರದೇಶಗಳಲ್ಲಿ ಸದ್ಯ ಇರುವ ಪರಿಸ್ಥಿತಿಯ ಬಗ್ಗೆ ಉಭಯ ದೇಶಗಳು ಪ್ರಾಮಾಣಿಕ ಮತ್ತು ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿವೆ ಎಂದು ಹೇಳಿದ್ದಾರೆ. 

     ಎರಡೂ ಕಡೆಯ ವಿದೇಶಾಂಗ ಸಚಿವರು ಮತ್ತು ಇಬ್ಬರು ವಿಶೇಷ ಪ್ರತಿನಿಧಿಗಳ ನಡುವೆ ಏರ್ಪಟ್ಟ ಒಪ್ಪಂದಗಳಿಗೆ ಅನುಸಾರವಾಗಿ, ಪಶ್ಚಿಮ ವಲಯದ ವಾಸ್ತವಿಕ ಗಡಿ ನಿಯಂತ್ರಣಾ ರೇಖೆಯ ಉದ್ದಕ್ಕೂ ಸೇನೆಯನ್ನು ಸಂಪೂರ್ಣವಾಗಿ ನಿಯೋಜಿಸುವ ನಿಟ್ಟಿನಲ್ಲಿ ಎರಡೂ ದೇಶಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿವೆ ಎಂದು ಅವರು ಪುನರುಚ್ಛರಿಸಿದ್ದಾರೆ. 

     ರಾಜತಾಂತ್ರಿಕ ಮತ್ತು ಸೇನೆಯ ಎರಡೂ ಮಾರ್ಗಗಳ ಮೂಲಕ ನಿಕಟ ಸಂವಹನವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ ಎಂದು ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries