ನವದೆಹಲಿ: ಫೇಸ್‌ಬುಕ್ ಇಂಡಿಯಾ ಸರ್ಕಾರಕ್ಕೆ ಪೂರಕವಾಗಿ ನಡೆದುಕೊಂಡಿದೆ ಎಂಬ ವಿಚಾರಕ್ಕೆ ಸಂಬಧಿಸಿದಂತೆ ಇಂದು ಪ್ರತಿಕ್ರಿಯೆ ನೀಡಿರುವ ಫೇಸ್‌ಬುಕ್, ದ್ವೇಷದ ಮಾತು ಮತ್ತು ಹಿಂಸಾಚಾರ ಪ್ರಚೋದಿಸುವ ವಿಷಯಕ್ಕೆ ಸಂಬಂಧಿಸಿದಂತೆ ತನ್ನ ಸಾಮಾಜಿಕ ಮಾಧ್ಯಮ ವೇದಿಕೆಯು ನಿಷೇಧಿಸುತ್ತದೆ. ಅದಲ್ಲದೇ ಯಾವುದೇ ರೀತಿಯ ರಾಜಕೀಯ ಸಂಬಂಧಗಳನ್ನು ಲೆಕ್ಕಿಸದೆ ಈ ನೀತಿಯನ್ನು ಜಾಗತಿಕವಾಗಿ ಜಾರಿಗೋಳಿಸಿದೆ ಎಂದು ಹೇಳಿಕೊಂಡಿದೆ.
ಯಾರೊಬ್ಬರ ರಾಜಕೀಯ ಪಕ್ಷ ಅಥವಾ ಸ್ಥಾನವನ್ನು ಪರಿಗಣಿಸದೆ ನಾವು ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸುತ್ತೇವೆ. ದ್ವೇಷದ ಅಂಶಗಳನ್ನು ತಡೆಯಲು ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ನಮಗೆ ತಿಳಿದಿದೆ. ಆದರೂ, ನಾವು ನಿಯಮಗಳನ್ನು ಜಾರಿಗೊಳಿಸುವಲ್ಲಿ ಪ್ರಗತಿ ಸಾಧಿಸುತ್ತಿದ್ದೇವೆ. ಈ ಮೂಲಕ ನ್ಯಾಯ ಮತ್ತು ನಿಖರತೆಯನ್ನು ಖಚಿತಪಡಿಸುತ್ತೇವೆ ಎಂದು ಫೇಸ್‌ಬುಕ್ ವಕ್ತಾರರು ತಿಳಿಸಿದ್ದಾರೆ.


