ಕಾಸರಗೋಡು: ಕಾಸರಗೋಡು ವಲಯ ಕಂದಾಯಾಧಿಕಾರಿ ಕಚೇರಿ ಸಂಕೀರ್ಣ ಮತ್ತು ಕಾಸರಗೋಡು ಕಿರು ಸಿವಿಲ್ ಸ್ಟೇಷನ್ ಗಳ ನಿರ್ಮಾಣ ಚಟುವಟಿಕೆಗಳ ಉದ್ಘಾಟನೆ ಸೋಮವಾರ ಜರಗಿತು.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಜರುಗಿದ ಸಮರಂಭದಲ್ಲಿ ಕಂದಾಯ ಸಚಿವ ಇ.ಚಂದ್ರಶೇಖರನ್ ಉದ್ಘಾಟನೆ ನಡೆಸಿದರು. ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್, ಕಾರಡ್ಕ ಬ್ಲೋಕ್ ಪಂಚಾಯತ್ ಅಧ್ಯಕ್ಷೆ ಓಮನಾ ರಾಚಂದ್ರನ್, ಹೆಚ್ಚುವರಿ ದಂಡನಾಧಿಕಾರಿ ಎನ್.ದೇವಿದಾಸ್ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಸ್ವಾಗತಿಸಿದರು. ಲೋಕೋಪಯೋಗಿ ಕಾರ್ಯಕಾರಿ ಇಂಜಿನಿಯರ್ ಮುಹಮ್ಮದ್ ಮುನೀರ್ ವರದಿ ವಾಚಿಸಿದರು. ವಲಯ ಕಂದಾಯಾಧಿಕಾರಿ ಟಿ.ಆರ್.ಅಹಮ್ಮದ್ ಕಬೀರ್ ವಂದಿಸಿದರು.


