ನವದೆಹಲಿ: ಸೋಮವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 82,170 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 60 ಲಕ್ಷ ಗಡಿದಾಟಿದೆ.
ಪ್ರಸ್ತುತ ದೇಶದಲ್ಲಿ 60,74,703 ಮಂದಿ ಸೋಂಕಿಗೊಳಗಾಗಿದ್ದು, ಈ ಪೈಕಿ 5,01,6521 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನೂ ದೇಶದಲ್ಲಿ 9,62,640 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುತ್ತಿದ್ದಾರೆ.




