ನವದೆಹಲಿ: ಕೇಂದ್ರ ಸರ್ಕಾರ ರೂ.2000 ಮುಖಬೆಲೆಯ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಿದೆ ಎಂದು ಇತ್ತೀಚಿಗೆ ಹಲವು ವರದಿಗಳು ಪ್ರಕಟಗೊಂಡಿದ್ದವು. ಈ ಕುರಿತಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸಂಸತ್ತಿನಲ್ಲಿ ಹೇಳಿಕೆಯೊಂದನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಸೀತಾರಾಮನ್, ನೋಟು ಮುದ್ರಣ ಸ್ಥಗಿತಗೊಳಿಸುವ ಯಾವುದೇ ನಿರ್ಣಯವನ್ನು ಸರ್ಕಾರ ಇದುವರೆಗೆ ಕೈಗೊಂಡಿಲ್ಲ ಎಂದಿದ್ದಾರೆ.
RBI ನೀಡಿರುವ ಸಲಹೆಯ ಮೇರೆಗೆ ನಿರ್ಣಯ ಕೈಗೊಳ್ಳಲಾಗುತ್ತದೆ:
ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ (Anurag Thakur), ನೋಟುಗಳ ಮುದ್ರಣ ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ, ನೋಟು ಮುದ್ರಣದ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಂದ ಸಲಹೆಯನ್ನು ಪಡೆದು ಸರ್ಕಾರ ಈ ನಿರ್ಧಾರ ಕೈಗೊಳ್ಳುತ್ತದೆ. ಇದರಿಂದ ಪಬ್ಲಿಕ್ ಡಿಮಾಂಡ್ ಆಧಾರದ ಮೇಲೆ ಸಿಸ್ಟಂ ನಲ್ಲಿ ಕರೆನ್ಸಿ ಸಮತೋಲನ ಕಾಯ್ದುಕೊಳ್ಳಲಾಗುತ್ತದೆ.
ಬಂದ್ ಮಾಡುವ ಕುರಿತು ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ:
2019-20 ಮತ್ತು 2020-21ರ ಅವಧಿಯಲ್ಲಿ 2000 ಮುಖಬೆಲೆಯ ಕರೆನ್ಸಿ ನೋಟುಗಳ ಮುದ್ರಣಕ್ಕಾಗಿ ಯಾವುದೇ ಹೊಸ ಆದೇಶ ನೀಡಲಾಗಿಲ್ಲ. ಆದರೆ, ಸರ್ಕಾರದ ವತಿಯಿಂದ ಇದುವರೆಗೆ ಈ ನೋಟುಗಳ ಮುದ್ರಣ ಸ್ಥಗಿತಗೊಳಿಸಲು ಯಾವುದೇ ರೀತಿಯ ಆದೇಶ ನೀಡಲಾಗಿಲ್ಲ ಎಂದು ಸಚಿವರು ಹೇಳಿದ್ದಾರೆ.





