HEALTH TIPS

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.23.9ರಷ್ಟು ಕುಸಿತ

        ನವದೆಹಲಿ: ಕರೋನಾವೈರಸ್ ಸೋಂಕು ಎದುರಿಸಲು ಜಾರಿಗೊಳಿಸಲಾದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್ ನಿಂದ ಜೂನ್ ವರೆಗೆ) ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆ ದರ ಶೇ ಮೈನಸ್ 23.9 ಕ್ಕೆ ಕುಸಿದಿದೆ.

        2020-21ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ 26.90 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದೆ. ಇದು 2019-20ರ ಮೊದಲ ತ್ರೈಮಾಸಿಕದಲ್ಲಿನ 35.35 ಲಕ್ಷ ಕೋಟಿ ರೂ.ಗೆ ಹೋಲಿಸಿದರೆ ಶೇ 23.9ರಷ್ಟು ಕುಸಿತವಾಗಿದೆ. 2019-20ರ ಮೊದಲ ತ್ರೈಮಾಸಿಕದಲ್ಲಿ ಶೇ 5.2ರಷ್ಟು ಬೆಳವಣಿಗೆ ದಾಖಲಿಸಲಾಗಿತ್ತು ಎಂದು ಸರ್ಕಾರ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ತಿಳಿಸಿದೆ.

      2020-21ರ ಮೊದಲ ತ್ರೈಮಾಸಿಕದ ಒಟ್ಟು ಮೌಲ್ಯ ಸೇರ್ಪಡೆ (ಜಿವಿಎ) 25.53 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದ್ದು, 2019-20ರ ಮೊದಲ ತ್ರೈಮಾಸಿಕದ 33.08 ಲಕ್ಷ ಕೋಟಿ ರೂ.ಗೆ ಹೋಲಿಸಿದರೆ ಶೇ 22.8 ರಷ್ಟು ಕುಸಿತ ಕಂಡುಬಂದಿದೆ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ) ಇಲ್ಲಿ ತಿಳಿಸಿದೆ. 

     2020-21ರ ಮೊದಲ ತ್ರೈಮಾಸಿಕದಲ್ಲಿ ಪ್ರಸ್ತುತ ಬೆಲೆಗಳಲ್ಲಿ ಜಿಡಿಪಿ 38.08 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದೆ. ಇದು 2019-20ರ ಮೊದಲ ತ್ರೈಮಾಸಿಕದಲ್ಲಿ 49.18 ಲಕ್ಷ ಕೋಟಿ ರೂ.ಗಳಷ್ಟಿತ್ತು. ಅಂದರೆ, 2019-20ರ ಮೊದಲ ತ್ರೈಮಾಸಿಕಕ್ಕೆ ಶೇ 22.6 ರಷ್ಟು ಕುಸಿತ ಕಂಡು ಬಂದಿದೆ. 2019-20ರ ಮೊದಲ ತ್ರೈಮಾಸಿಕದಲ್ಲಿ ಶೇ 8.1ರಷ್ಟು ಬೆಳವಣಿಗೆ ಸಾಧಿಸಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries