HEALTH TIPS

ಕೇರಳ, ಪಶ್ಚಿಮ ಬಂಗಾಳದಲ್ಲಿ ಎನ್ ಐಎ ಬೃಹತ್ ಕಾರ್ಯಾಚರಣೆ: 9 ಮಂದಿ ಅಲ್-ಖೈದಾ ಉಗ್ರರ ಬಂಧನ

        ನವದೆಹಲಿ: ದೇಶದಲ್ಲಿ ಭಯೋತ್ಪಾದನೆ ಮತ್ತು ಭಯೋತ್ಪಾದಕ ಜಾಲದ ಮೇಲೆ ಬೃಹತ್ ಕಾರ್ಯಾಚರಣೆಯನ್ನು ಶನಿವಾರ ಬೆಳ್ಳಂಬೆಳಗ್ಗೆ ಕೈಗೆತ್ತಿಕೊಂಡ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಲ್ ಖೈದಾಉಗ್ರಗಾಮಿ ಸಂಘಟನೆಗೆ ಸೇರಿದ  9 ಮಂದಿ ಉಗ್ರರನ್ನು ಬಂಧಿಸಿದೆ.

    Bbಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆ ಮತ್ತು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಲ್ ಖೈದಾ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ಸಿಬ್ಬಂದಿ ಬಂಧಿಸಿದ್ದಾರೆ. ದೇಶದ ಹಲವು ಕಡೆಗಳಲ್ಲಿ ಸಂಭಾವ್ಯ ದಾಳಿ ನಡೆಸಲು ಇವರು ಸಂಚು ರೂಪಿಸಿದ್ದರು, ಇವರ ಬಂಧನದಿಂದ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು ತನಿಖಾ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

    ಬಂಧಿತ ಉಗ್ರರು ಹಣ ಸಂಗ್ರಹಿಸಿ ದೆಹಲಿಗೆ ಪ್ರಯಾಣಿಸಿ ಬಂದೂರು, ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವ ಯೋಜನೆ ಹಾಕಿಕೊಂಡಿದ್ದರು ಎಂದು ತಿಳಿದುಬಂದಿದೆ. ಪಾಕಿಸ್ತಾನ ಮೂಲದ ಅಲ್ ಖೈದಾ ಭಯೋತ್ಪಾದಕ ಸಂಘಟನೆ ಇವರನ್ನು ಸೋಷಿಯಲ್ ಮೀಡಿಯಾಗಳ ಮೂಲಕ ಸಂಪರ್ಕಿಸಿ ನೇಮಕ ಮಾಡಿಕೊಂಡಿತ್ತು. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಲು ಹಲವು ದಿನಗಳಿಂದ ಸಂಚು ರೂಪಿಸುತ್ತಿತ್ತು ಎಂದು ತಿಳಿದುಬಂದಿದೆ.

    ಬಂಧಿತರ ಬಳಿ ಇದ್ದ ಡಿಜಿಟಲ್ ಉಪಕರಣ, ದಾಖಲೆಗಳು, ಜಿಹಾದಿ ಸಾಹಿತ್ಯ, ಹರಿತವಾದ ಆಯುಧಗಳು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ತಯಾರಿಸುವ ಮಾರ್ಗದರ್ಶಿ ಪುಸ್ತಕಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಎನ್​ಐಎ ತಿಳಿಸಿದೆ.

     ಕೇರಳದಲ್ಲಿ ಇಂದು ಬಂಧಿತರಾದವರನ್ನು ಮುರ್ಷಿದ್ ಹಸನ್, ಇಯಾಕುಬ್ ಬಿಸ್ವಾಸ್ ಮತ್ತು ಮೊಸರಫ್ ಹುಸೇನ್ ಎಂದು ಗುರುತಿಸಲಾಗಿದ್ದು ಇವರೆಲ್ಲರೂ ಎರ್ನಾಕುಲಂ ನಿವಾಸಿಗಳು, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಸೆರೆ ಸಿಕ್ಕವರನ್ನು ನಜ್ಮುಸ್ ಸಾಕಿಬ್, ಅಬು ಸುಫಿಯಾನ್, ಮೈನುಲ್ ಮೊಂಡಲ್, ಲಿಯು ಯೀನ್ ಅಹ್ಮದ್, ಅಲ್ ಮಮುನ್ ಕಮಲ್ ಮತ್ತು ಅತಿತುರ್ ರೆಹಮಾನ್ ಎಂದು ಗುರುತಿಸಲಾಗಿದೆ.

     ಬಂಧಿತ ಉಗ್ರರನ್ನು ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ಕಸ್ಟಡಿಗೊಪ್ಪಿಸಿ ವಿಚಾರಣೆ ನಡೆಸಲು ಸಂಬಂಧಪಟ್ಟ ನ್ಯಾಯಾಲಯ ಮುಂದೆ ಹಾಜರುಪಡಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries