HEALTH TIPS

ಕೊರೊನಾಗೆ ಕೇಂದ್ರ ಸಚಿವ ಬಲಿ-ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ

    ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರದಲ್ಲಿ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಚನ್ನಬಸಪ್ಪ ಅಂಗಡಿ ಅವರು ವಿಧಿವಶರಾಗಿದ್ದಾರೆ.

    65 ವರ್ಷದ ಸುರೇಶ್ ಅಂಗಡಿ ಅವರು ಕೇಂದ್ರದಲ್ಲಿ ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2 ವಾರಗಳ ಹಿಂದೆ ಟ್ವೀಟ್ ಮಾಡಿದ್ದ ಅಂಗಡಿ ಅವರು ನಾನು ಕೊರೋನಾಗೆ ತುತ್ತಾಗಿದ್ದು ನನಗೆ ಯಾವುದೇ ರೋಗಲಕ್ಷಣಗಳು ಎಂದು ಟ್ವೀಟಿಸಿದ್ದರು.

     ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸುರೇಶ್ ಅಂಗಡಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

     4 ಬಾರಿ ಲೋಕಸಭೆ ಸಂಸದರಾಗಿ ಸುರೇಶ್ ಅಂಗಡಿ ಆಯ್ಕೆಯಾಗಿದ್ದರು. 2004, 2009, 2014 ಮತ್ತು 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು. 

    ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆ 1955 ಜೂನ್ 1 ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದಲ್ಲಿ ಜನಿಸಿದರು. ಅಂಗಡಿಗೆ ಮದುವೆಯಾಗಿ 2 ಹೆಣ್ಣು ಮಕ್ಕಳಿದ್ದಾರೆ.

    ಸುರೇಶ್ ಅಂಗಡಿ ಅವರು ಬೆಳಗಾವಿಯ ಎಸ್.ಎಸ್.ಎಸ್.ಸಮಿತಿ ಕಾಲೇಜ್ ಆಫ್ ಕಾಮರ್ಸ್ ನಿಂದ ಪದವಿಯನ್ನು ಪಡೆದಿದ್ದರು. ನಂತರ ಅವರು ಬೆಳಗಾವಿಯ ಪ್ರತಿಷ್ಠಿತ ರಾಜ ಲಖಮ್ ಗೌಡ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು. 

    ಸಾರ್ವಜನಿಕ ಜೀವನಕ್ಕೆ ಪ್ರವೇಶಿಸುವ ಮೊದಲು ಅವರು ತಮ್ಮದೇ ಆದ ಖಾಸಗಿ ವ್ಯವಹಾರವನ್ನು ನಡೆಸುತ್ತಿದ್ದರು. ವಾಸವದತ್ತ ಸಿಮೆಂಟ್[ಪ್ರಸ್ತುತ ಬಿರ್ಲಾ ಶಕ್ತಿ ಸಿಮೆಂಟ್] ಅನ್ನು ಯಶಸ್ವಿಯಾಗಿ ಚಾಲನೆಗೆ ತಂದು ಬೆಳಗಾವಿಯಲ್ಲೇ ಪ್ರಥಮ ಸ್ಥಾನಕ್ಕೆ ಅಂಗಡಿ ತಂದರು. ಇಂದಿಗೂ ಅವರು ತಮ್ಮ ಸಿಮೆಂಟ್ ವ್ಯವಹಾರವನ್ನು ನಡೆಸುತ್ತಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries