HEALTH TIPS

ಟ್ರಂಪ್ ಭೇಟಿ ವೇಳೆ ಕಡ್ಡಾಯ ಕೋವಿಡ್ ಪರೀಕ್ಷೆ ಅಗತ್ಯವಿರಲಿಲ್ಲ- ಕೇಂದ್ರ ಸರ್ಕಾರ

         ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ರಿಂದ 25ರವರೆಗಿನ ಭಾರತ ಭೇಟಿ ವೇಳೆಯಲ್ಲಿ ಕಡ್ಡಾಯ ಕೋವಿಡ್ ಪರೀಕ್ಷೆ ಅಗತ್ಯವಿರಲಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

      ವಿದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಚ್ 4 ರಿಂದ ಕಡ್ಡಾಯವಾಗಿ ಕೋವಿಡ್-19 ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ವಿದೇಶಾಂಗ ಖಾತೆ ಸಹಾಯಕ ಸಚಿವ ವಿ. ಮುರಳೀಧರನ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

       ಟ್ರಂಪ್ ಭೇಟಿ ವೇಳೆಯಲ್ಲಿ ಅಮೆರಿಕಾ ಅಧ್ಯಕ್ಷರ ಸಿಬ್ಬಂದಿ ಮತ್ತು ನಿಯೋಗವನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತಾ? ಎಂಬ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.

     ವಿಶ್ವ ಆರೋಗ್ಯ ಸಂಸ್ಥೆ ಮಾರ್ಚ್ 11 ರಿಂದ ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಿತ್ತು. ವಿದೇಶಗಳಿಂದ ಬರುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಚ್ 4ರಿಂದ ಕೋವಿಡ್-19 ತಪಾಸಣೆಯನ್ನು ಕಡ್ಡಾಯಪಡಿಸಲಾಯಿತು ಎಂದು ಹೇಳಿದ್ದಾರೆ.

      ಟ್ರಂಪ್  ಜೊತೆಯಲ್ಲಿ ಪ್ರಥಮ ಮಹಿಳೆ ಮೆಲಾನಿಯಾ , ಪುತ್ರಿ ಇವಾಂಕ, ಅಳಿಯ ಜಾರೆಡ್ ಕುಶ್ನೇರ್ ಹಾಗೂ ಅವರ ಆಡಳಿತದ ಉನ್ನತ ಅಧಿಕಾರಿಗಳು ಭಾರತ ಭೇಟಿ ಕೈಗೊಂಡಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries