ತಿರುವನಂತಪುರ: ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ಮೂಲದ ಗುಲ್ ನವಾಜ್ ಮತ್ತು ಕಣ್ಣೂರು ಮೂಲದ ಶುಹೈಬ್ ಎಂಬವರನ್ನು ರಾಷ್ಟ್ರೀಯ ತನಿಖಾ ತಂಡ ಬಂಧಿಸಿದೆ.
ಸೌದಿ ಅರೇಬಿಯಾದಿಂದ ತಿರುವನಂತಪುರ ವಿಮಾನ ನಿಲ್ದಾಣಕ್ಕೆ ಬಂದಾಗ ಅವರನ್ನು ಬಂಧಿಸಲಾಗಿದೆ. ಈ ಹಿಂದೆ ಅವರ ವಿರುದ್ಧ ಲುಕ್ ಔಟ್ ನೋಟಿಸ್ ನೀಡಲಾಗಿತ್ತು. ಬಂಧಿತ ವ್ಯಕ್ತಿಗಳು ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.





