HEALTH TIPS

20 ವಿದೇಶಿ ತಬ್ಲೀಗ್ ಜಮಾತ್ ಸದಸ್ಯರ ಖುಲಾಸೆ

      ಮುಂಬೈ: ಕೊರೊನಾ ಲಾಕ್ ಡೌನ್ ವೇಳೆ ನಿಷೇಧಾಜ್ಞೆ ಉಲ್ಲಂಘಿಸಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿದ್ದ ಮತ್ತು ನವದೆಹಲಿಯ ಮರ್ಕಜ್ ನಲ್ಲಿ ತಬ್ಲೀಗ್ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ 20 ವಿದೇಶಿಯರನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ಖುಲಾಸೆಗೊಳಿಸಿದೆ. 

      ಅವರನ್ನು ಜೈಲಿನಿಂದ ಸೋಮವಾರ ಬಿಡುಗಡೆ ಮಾಡಲಾಗಿದೆ. ನಿನ್ನೆ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್ ಆರ್ ಖಾನ್ ಅವರು ಹೊರಡಿಸಿದ ಆದೇಶದಲ್ಲಿ, ತಬ್ಲೀಗಿಗಳ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಮತ್ತು ಆರೋಪಿತ ವ್ಯಕ್ತಿಗಳು ಯಾವುದೇ ಅನುಮಾನಾಸ್ಪದವಾಗಿ ನಡೆದುಕೊಂಡಿಲ್ಲ. ನಿಯಮ ಉಲ್ಲಂಘಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ತಿಳಿಸಿದ್ದಾರೆ.

       ಲಾಕ್ ಡೌನ್ ಮಾನದಂಡ ಮತ್ತು ಆದೇಶವನ್ನು ಆರೋಪಿಗಳು ಉಲ್ಲಂಘಿಸಿಲ್ಲ ಮತ್ತು ಪೊಲೀಸ್ ಆಯುಕ್ತರ ಆದೇಶವನ್ನು ಉಲ್ಲಂಘಿಸಿಲ್ಲ ಎಂದು ಪ್ರಾಸಿಕ್ಯೂಷನ್ ಸಾಕ್ಷಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries