ಕಾಸರಗೋಡು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಅತ್ಯಧಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 14ದಿನಗಳ ಅವಧಿಯಲ್ಲಿ ಜನ ಗುಂಪು ಸೇರುವ ಯಾವುದೇ ಸಾರ್ವಜನಿಕ-ಖಾಸಗಿ ಸಮಾರಂಭಗಳಲ್ಲಿ ತಾವು ಮತ್ತು ತಮ್ಮ ಕುಟುಂಬದಸದಸ್ಯರು ಭಾಗಿಯಾಗುವುದಿಲ್ಲ ಎಂಬುದಾಗಿ ಸರ್ಕಾರಿ ಸಿಬ್ಬಂದಿ ಮತ್ತು ಶಿಕ್ಷಕರು ಪ್ರತಿಜ್ಞೆ ಕೈಗೊಂಡರು.
ಪೆÇಲೀಸರು, ಆರೋಗ್ಯ ಕಾರ್ಯಕರ್ತರು, ಸರಕಾರಿ ಸಿಬ್ಬಂದಿ ಮೊದಲಾದವರಲ್ಲಿ ಕೋವಿಡ್ ಸೋಂಕು ಅಧಿಕ ಪ್ರಮಾಣದಲ್ಲಿ ಖಚಿತಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕರೊನಾ ಕೋರ್ ಸಮಿತಿ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರ ಆದೇಶ ಪ್ರಕಾರ ಈ ಕಾರ್ಯಕ್ರಮ ನಡೆಸಲಾಗಿದೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಹೆಚ್ಚುವರಿದಂಡನಾಧಿಕಾರಿ ಎನ್.ದೇವಿದಾಸ್ ಪ್ರತಿಜ್ಞೆ ಬೋಧಿಸಿದರು. ಅರಣ್ಯ ವಿಭಾಗೀಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಅರಣ್ಯಅಧಿಕಾರಿ ಅನೂಪ್ ಕುಮಾರ್, ಜಿಲ್ಲಾ ವೈದ್ಯಕೀಯ ಕಚೇರಿಯಲ್ಲಿ ಆರ್.ಸಿ.ಎಚ್.ಅಧಿಕಾರಿ ಡಾ.ಮುರಳೀಧರ ನಲ್ಲೂರಾಯ, ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ. ಪ್ರತಿಜ್ಞೆ ಬೋಧಿಸಿದರು. ಜಿಲ್ಲಾ ಪಂಚಾಯಿತಿ ಒಳಗೊಂಡಂತೆ ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ಪ್ರತಿಜ್ಞಾ ಕಾರ್ಯಕ್ರಮ ನಡೆಯಿತು.





