HEALTH TIPS

ವೃತ್ತಿಪರ ಯಕ್ಷಗಾನ ಮೇಳಗಳು ನವೆಂಬರ್ ಅಂತ್ಯಕ್ಕೆ ತಿರುಗಾಟಕ್ಕೆ ಸಿದ್ಧತೆಗೆ ಸಚಿವ ಕೋಟ ಸೂಚನೆ

        ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿದ್ದು, ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕಲಾವಿದರು ಮತ್ತು ಪೂರಕ ಕೆಲಸಗಾರರಿದ್ದಾರೆ. ಯಕ್ಷಗಾನ ಮೇಳಗಳು ಕೋವಿಡ್ – 19 ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯಕ್ಕೆ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಅಧಿಕಾರಿಗಳು, ಕಲಾವಿದರು ಹಾಗೂ ಮೇಳಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

      ಕಲಾವಿದರ ಪರವಾಗಿ ಖ್ಯಾತ ಭಾಗವತ   ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಉಜಿರೆ ಅಶೋಕ್ ಭಟ್, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಸ್ಯಕಲಾವಿದ ಶ್ರೀ ಸೀತಾರಾಮ್ ಕುಮಾರ್ ಮಾತನಾಡುತ್ತಾ, ವೃತ್ತಿಪರ ಯಕ್ಷಗಾನ ಮೇಳಗಳು ನಿಂತಲ್ಲಿ ಕಲಾವಿದರ ಬದುಕು ದುಸ್ತರವಾಗುವುದು. ಈಗಾಗಲೇ ಕೋವಿಡ್ – 19 ನಿಂದಾಗಿ ನೊಂದ ಕಲಾವಿದರ ಕುಟುಂಬದ ನೆರವಿಗೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಮನವಿ ಮಾಡಿದರು.

       ಕಟೀಲು ದೇವಳದ ಆಡಳಿತ ಮೊಕ್ತೇಸರ ಶ್ರೀ ಹರಿ ಅಸ್ರಣ್ಣ ಮಾತನಾಡಿ, ಕಟೀಲಿನ ಆರು ಮೇಳಗಳು ನಿಗದಿತ ಸಮಯದಲ್ಲಿ ಪ್ರದರ್ಶನಕ್ಕೆ ಹೊರಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಬಪ್ಪನಾಡು, ಸಸಿಹಿತ್ಲು ಮೇಳಗಳ ಸಹಿತ ಅನೇಕರು ಕರೋನದ ಸಂದರ್ಭದಲ್ಲಿ ಕಲಾವಿದರು ಮತ್ತು ವೃತ್ತಿಪರ ಮೇಳಗಳ ಸಮಸ್ಯೆಗಳನ್ನು ವಿವರಿಸಿದರು.


      ಈಗಿರುವ ಮೇಳಗಳಲ್ಲಿ ಯಾವುದಾದರೂ ನಿಲುಗಡೆಯಾದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿಯ ಸಂಪನ್ಮೂಲವಿರುವ ದೇವಳದ ಮೂಲಕ ಹೆಚ್ಚುವರಿ ಮೇಳಗಳನ್ನು ರಚಿಸಲು ಇಲಾಖೆ ಪರಿಶೀಲಿಸಿ ಬೇಕೆಂಬ ಮನವಿ ಸಭೆಯಲ್ಲಿ ಮೂಡಿಬಂತು.

     ಸರ್ಕಾರದ ಪರವಾಗಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ   ಕೋಟ ಶ್ರೀನಿವಾಸ ಪೂಜಾರಿಯವರು ಇಂತಹ ಪರಿಸ್ಥಿತಿಯಲ್ಲಿ ಯಕ್ಷಗಾನ ಮೇಳಗಳ ಕೊನೆಯ ಕಲಾವಿದನಿಗೂ ತೊಂದರೆ ಆಗದಂತೆ ಸರ್ಕಾರ ಕಲಾವಿದರ ಬೆಂಬಲಕ್ಕೆ ನಿಲ್ಲಲಿದೆ ಎಂದರು.

      ಸಭೆಯಲ್ಲಿ ಜಿಲ್ಲಾಧಿಕಾರಿಯವರು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಉಪಸ್ಥಿತರಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries