ಬದಿಯಡ್ಕ: ಬಿಜೆಪಿ ಕುಂಬ್ಡಾಜೆ ಪಂಚಾಯತು ಮಟ್ಟದ ಚುನಾವಣಾ ಕಾರ್ಯಾಗಾರ ಇತ್ತೀಚೆಗೆ ಮವ್ವಾರಿನ ಬಿಜೆಪಿ ಕಾರ್ಯಾಲಯದಲ್ಲಿ ಜರಗಿತು.
ಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯ ಎಂ.ಸಂಜೀವ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಜೆಪಿ ಕುಂಬ್ಡಾಜೆ ಪಂಚಾಯತಿ ಸಮಿತಿ ಅಧ್ಯಕ್ಷ ರವೀಂದ್ರ ರೈ ಗೋಸಾಡ ರವರ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಬಿಜೆಪಿ -ಓ ಬಿ ಸಿ ಮೋರ್ಚಾ ರಾಜ್ಯಾಧ್ಯಕ್ಷ ಎಂ.ಪಿ. ರಾಧಾಕೃಷ್ಣನ್ ಪ್ರಧಾನ ಭಾಷಣ ಮಾಡಿದರು. ನೇತಾರರಾದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಕುಮಾರನ್ ಕುದ್ರೆಪ್ಪಾಡಿ, ಸುನಿಲ್ ಪಿ ಆರ್, ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಧನಂಜಯ ಮಧೂರು, ಪಂಚಾಯತಿ ಪ್ರಧಾನ ಕಾರ್ಯದರ್ಶಿ ಶಶಿಧರ ತೆಕ್ಕೆಮೂಲೆ ಮೊದಲಾದವರು ಉಪಸ್ಥಿತರಿದ್ದರು.




