HEALTH TIPS

ಪಾಕಿಸ್ತಾನ: ಮುಂಬೈ ದಾಳಿಯ ರೂವಾರಿ ಹಫೀಜ್​ ಸಯೀದ್​ಗೆ ಮತ್ತೆ 10 ವರ್ಷ ಜೈಲು

     ಲಾಹೋರ್: ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್​​-ಉದ್​-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್​ ಸಯೀದ್​ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ​ ಮತ್ತೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.

     ಕಳೆದ ವರ್ಷ ಜುಲೈ 17ರಂದು ನಡೆದ ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 11 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈಗ ಮತ್ತೆ ಎರಡು ಪ್ರಕರಣಗಳಲ್ಲಿ ಕೋರ್ಟ್​ ಹಫೀಜ್ ಗೆ ಮತ್ತೆ 10 ವರ್ಷ ಜೈಲು ಶಿಕ್ಷೆ ನೀಡಿದೆ. ಅಲ್ಲದೆ ಹಫೀಜ್​ನ ಮೂವರು ಸಹಚರರಿಗೂ ನ್ಯಾಯಾಲಯ ಜೈಲು ಶಿಕ್ಷೆ  ನೀಡಿದೆ.

     ಹಫೀಜ್​ ಹಾಗೂ ಆತನ ಇಬ್ಬರು ಸಹಚರರಾದ ಜಫರ್​ ಇಕ್ಬಾಲ್​ ಹಾಗೂ ಯಹ್ಯಾ ಮುಜಾಹಿದ್​ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ಹಾಗೂ ಹಫೀಜ್​ ಭಾವ ಅಬ್ದುಲ್​ ರೆಹ್ಮಾನ್​ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

      ಸದ್ಯ ಲಾಹೋರ್ ಜೈಲಿನಲ್ಲಿರುವ ಹಫೀಜ್​ ವಿರುದ್ಧ ಒಟ್ಟು 41 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 24 ಪ್ರಕರಣಗಳು ಈಗಾಗಲೇ ಇತ್ಯರ್ಥಗೊಂಡಿವೆ. ಇನ್ನು ಉಳದಿ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಶೀಘ್ರವೇ ತೀರ್ಪು ಹೊರ ಬರಲಿದೆ. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries