HEALTH TIPS

ಕೋವಿಡ್-19: ಅಹಮದಾಬಾದ್‌ನಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ

        ಅಹಮದಾಬಾದ್‌: ಕೋವಿಡ್‌-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ನಗರದಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲು ಅಹಮದಾಬಾದ್‌ ಮಹಾನಗರ ಪಾಲಿಕೆ ನಿರ್ಧರಿಸಿದೆ. ಇಂದಿನಿಂದಲೇ ಈ ಕ್ರಮ ಜಾರಿಯಾಗಲಿದೆ.

       ಗುಜರಾತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿ ಪ್ರಕಾರ ರಾಜಧಾನಿ ಅಹಮದಾಬಾದ್‌ನಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 2 ಸಾವಿರಕ್ಕಿಂತ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ ಇದುವರೆಗೆ ಒಟ್ಟು 69,78,249 ಜನರಿಗೆ ಕೋವಿಡ್‌-19 ಸೋಂಕು ಪರೀಕ್ಷೆ ನಡೆಸಲಾಗಿದ್ದು, ಇನ್ನೂ 12,457 ಪ್ರಕರಣಗಳು ಸಕ್ರಿಯವಾಗಿವೆ.

      ಹಬ್ಬಗಳ ಸಂದರ್ಭದಲ್ಲಿ ಜನಸಂದಣಿ ಹೆಚ್ಚಾಗಿದ್ದು, ಸೋಂಕು ಪ್ರಕರಣಗಳ ಹಠಾತ್ ಏರಿಕೆಗೆ ಕಾರಣ ಎಂದು ಪಾಲಿಕೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಮಾಸ್ಕ್‌ ಬಳಸದಿರುವುದು, ಸಾಮಾಜಿಕ ಅಂತರ ನಿಯಮವನ್ನು ಪಾಲಿಸದಿರುವುದು ಪ್ರಕರಣಗಳ ಏರಿಕೆಗೆ ಕಾರಣ ಎಂದು ಹೆಚ್ಚುವರಿ ಮುಖ್ಯಕಾರ್ಯದರ್ಶಿ (ಅರಣ್ಯ ಮತ್ತು ಪರಿಸರ ಇಲಾಖೆ) ಡಾ.ರಾಜೀವ್‌ ಕುಮಾರ್‌ ಗುಪ್ತಾ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries