ಕುಂಬಳೆ: ಸಮಾಜದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸಕಲ ನೆರವನ್ನೂ ನೀಡಿ ಪ್ರೋತ್ಸಾಹಿಸುವುದನ್ನು ಕರ್ತವ್ಯವೆಂದು ಬಂಟರ ಸಂಘಗಳು ತಮ್ಮ ಕಾರ್ಯಸೂಚಿಯಲ್ಲಿ ಅಳವಡಿಸಬೇಕೆಂದು ಮಂಗಳೂರಿನ ಬಂಟರ ಯಾನೆ ನಾಡವರ ಮಾತೃಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಶೆಟ್ಟಿ ಕರೆನೀಡಿದರು.
ಕಾಸರಗೋಡು ಜಿಲ್ಲಾ ಬಂಟರ ಸಂಘದ ನೇತೃತ್ವದಲ್ಲಿ ಕುಂಬಳೆ ಸಿಟಿ ಹಾಲ್ ಸಭಾಂಗಣದಲ್ಲಿ ಶನಿವಾರ ನಡೆದ ವಿದ್ಯಾಭ್ಯಾಸ ಸಹಾಯ ಧನ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಕಾಸರಗೋಡು ಜಿಲ್ಲೆಯ ಬಂಟ ಸಮುದಾಯದವರಿಗೆ ಸಕಲ ಸಹಾಯ, ಸಹಕಾರ ನೀಡಲು ಮಂಗಳೂರಿನ ಮಾತೃಸಂಘವು ಬದ್ದವೆಂದು ಅವರು ಹೇಳಿದರು.
ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಬಿ.ಸುಬ್ಬಯ್ಯ ರೈ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಜಿಲ್ಲಾಧ್ಯಕ್ಷ ನ್ಯಾಯವಾದಿ ಎ.ಸದಾನಂದ ರೈ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಮಂಜೇಶ್ವರ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಕೆ.ದಾಸಣ್ಣ ಆಳ್ವ, ಕುಂಬಳೆ ಬಂಟ್ಸ್ ಸರ್ವಿಸ್ ಸೊಸೈಟಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಳಮಲೆ, ಕಾಸರಗೋಡು ವಲಯ ಬಂಟರ ಸಂಘದ ಅಧ್ಯಕ್ಷ ಸುಬ್ಬಣ್ಣ ಶೆಟ್ಟಿ ಕುಚ್ಚಿಕ್ಕಾಡು ಉಪಸ್ಥಿತರಿದ್ದು ಶುಭಹಾರೈಸಿದರು.
ಜಿಲ್ಲಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ ರೈ ಸ್ವಾಗತಿಸಿ, ಉಪಾಧ್ಯಕ್ಷರುಗಳಾದ ಚಂದ್ರಹಾಸ ರೈ, ಶ್ಯಾಮಲಾ ಎಂ.ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಕಿರಣ್ ಮಾಡ, ಗೋಪಾಲಕೃಷ್ಣ ಶೆಟ್ಟಿ ಕುತ್ತಿಕ್ಕಾರ್, ಪ್ರತಿಭಾ ಪುರಸ್ಕಾರ, ವಿದ್ಯಾಭ್ಯಾಸ ಧನ ಸಹಾಯ ಕಾರ್ಯಕ್ರಮ ನಿರ್ವಹಿಸಿದರು. ರವೀಂದ್ರ ರೈ ಮಲ್ಲಾವರ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಪಂಚಾಯತಿ ಘಟಕಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.






