ತಿರುವನಂತಪುರ: ರಾಜ್ಯದಲ್ಲಿ ಶಾಲೆ- ಕಾಲೇಜುಗಳನ್ನು ತೆರೆಯುವ ಬಗ್ಗೆ ತಕ್ಷಣ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ತಜ್ಞರೊಂದಿಗೆ ವಿವರವಾದ ಚರ್ಚೆ ನಡೆಸಿದ ಬಳಿಕವಷ್ಟೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಇಂದಿನ ಕೋವಿಡ್ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸಾರ್ವಜನಿಕ ಪರೀಕ್ಷೆಗಳ ಮೂಲಕ ಮೌಲ್ಯಮಾಪನ ಮಾಡುವ ಉನ್ನತ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಗಳು ಮತ್ತು ಕಾಲೇಜುಗಳನ್ನು ತೆರೆಯಬೇಕೆ ಎಂದು ಪರಿಗಣಿಸಬೇಕಿದೆ. ಆದಾಗ್ಯೂ, ಸಣ್ಣ ತರಗತಿಗಳ ವಿದ್ಯಾರ್ಥಿಗಳ ವಿಷಯದಲ್ಲಿ, ತರಗತಿಗಳನ್ನು ಪ್ರಾರಂಭಿಸುವುದು ಮತ್ತು ಪುಟಾಣಿಗಳನ್ನು ಶಾಲೆಗೆ ಬರುವಂತೆ ವ್ಯವಸ್ಥೆಗೊಳಿಸುವುದು ಅನುಮಾನವಿದೆ ಎಮದು ತಿಳಿಸಿದರು.
ಇದೇ ವೇಳೆ ಸೋಂಕು ಹರಡುವಿಕೆಯ ಪ್ರಮಾಣವು ಇದೇ ರೀತಿ ಕಡಿಮೆ ಇರುವ ಪರಿಸ್ಥಿತಿಯಲ್ಲಿ ಉತ್ತಮ ಸುಧಾರಣೆ ಕಂಡುಬಂದರೆ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ವರ್ಗದ ವಿದ್ಯಾರ್ಥಿಗಳಿಗೆ ಸಮಗ್ರ ಪರೀಕ್ಷೆಯನ್ನು ನಡೆಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ತರಗತಿಗಳಿಗೆ ಹಾಜರಾಗಿಸುವ ಸಾಧ್ಯತೆಗಳಿವೆಯೇ ಎಂದು ಪರಿಶೀಲಿಸಲಾಗುತ್ತಿದೆ. ತಜ್ಞರ ಅಭಿಪ್ರಾಯವನ್ನು ಪರಿಗಣಿಸಿದ ನಂತರ ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿರುವರು.


