ಕುಂಬಳೆ: ಸೀತಾಂಗೋಳಿಯ ಸಂತೋಷ್ ಆಟ್ರ್ಸ್ ಆಂಡ್ ಸ್ಪೋಟ್ರ್ಸ್ ಕ್ಲಬ್ ನ ಆಶ್ರಯದಲ್ಲಿ ಮೇಜರ್ ಸಂದೀಪ್ ಉಣ್ಣಿಕೃಷ್ಣನ್ ಸ್ಮರಣಾರ್ಥ ಇಂದು ಬೆಳಿಗ್ಗೆ 10 ರಿಂದ ಸೀತಾಂಗೋಳಿ ಮೇಜರ್ ಸಂದೀಪ್ ನಗರದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಶಿಬಿರವನ್ನು ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಸೀತಾಂಗೋಳಿ ಘಟಕದ ಅಧ್ಯಕ್ಷ ನಸೀರ್ ಉದ್ಘಾಟಿಸುವರು. ಸಾಮಾಜಿಕ ಕಾರ್ಯಕರ್ತ ಅಹಮ್ಮದ್ ಹಾಜಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಕ್ಲಬ್ ಪ್ರಕಟಣೆಯಲ್ಲಿ ತಿಳಿಸಿದೆ.





