HEALTH TIPS

ಹಲವು ಕ್ರಮಗಳಿಂದ ದಕ್ಷಿಣ ಚೀನಾ ಸಮುದ್ರದ ಮೇಲೆ ನಂಬಿಕೆ ಕಡಿಮೆಯಾಗುತ್ತಿದೆ: ಪೂರ್ವ ಏಷ್ಯಾ ಶೃಂಗದಲ್ಲಿ ಭಾರತ

       ನವದೆಹಲಿ: ಚೀನಾಕ್ಕೆ ಭಾರತ ನೀಡಿರುವ ಪರೋಕ್ಷ ಸಂದೇಶದಲ್ಲಿ, ದಕ್ಷಿಣ ಚೀನಾ ಸಮುದ್ರದಲ್ಲಿನ ನಂಬಿಕೆಯನ್ನು ಕಳೆದುಕೊಳ್ಳುವ ಕ್ರಮಗಳು ಮತ್ತು ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅಂತರಾಷ್ಟ್ರೀಯ ಸಮಗ್ರತೆಯನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದೆ. ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ಗೌರವಿಸಬೇಕು ಎಂದು ಹೇಳಿದೆ.

        15ನೇ ಪೂರ್ವ ಏಷ್ಯಾ ಶೃಂಗಸಭೆ(ಇಎಎಸ್)ನ್ನು ಮೊನ್ನೆ ದೆಹಲಿಯಲ್ಲಿ ಉದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಇಂಡೊ-ಫೆಸಿಫಿಕ್ ಮತ್ತು ಈ ಪ್ರದೇಶದಲ್ಲಿ ಹೆಚ್ಚುತ್ತಿರುವ 10 ಆಸಿಯಾನ್ ರಾಷ್ಟ್ರಗಳೊಂದಿಗೆ ಸಂಯೋಜಿತ ಮತ್ತು ಸಂಘಟಿತ ಬಂದರು ಪ್ರದೇಶದ ಅಭಿವೃದ್ಧಿಗೆ ಹೆಚ್ಚುತ್ತಿರುವ ಆಸಕ್ತಿ ಬಗ್ಗೆ ಕೂಡ ಮಾತನಾಡಿದ್ದಾರೆ.

      ಇಂಡೊ-ಫೆಸಿಫಿಕ್ ಪ್ರದೇಶಗಳ ಅಭಿವೃದ್ಧಿಗೆ ಹಲವು ದೇಶಗಳು ಇತ್ತೀಚೆಗೆ ಘೋಷಿಸಿರುವ ನೀತಿಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಸಹಕಾರಕ್ಕೆ ನಾವು ಬದ್ಧವಾಗಿದ್ದರೆ ಹಲವು ಆಯಾಮಗಳಲ್ಲಿ ಸಮನ್ವಯತೆ ಕಾಪಾಡುವುದು ಯಾವತ್ತಿಗೂ ಸವಾಲು ಆಗುವುದಿಲ್ಲ ಎಂದು ವಿದೇಶಾಂಗ ಸಚಿವರು ಹೇಳಿದರು. ವರ್ಚುವಲ್ ಕಾನ್ಫರೆನ್ಸ್ ಮೂಲಕ ನಡೆದ ಸಮ್ಮೇಳನದ ಅಧ್ಯಕ್ಷತೆಯನ್ನು ವಿಯೆಟ್ನಾಂ ಪ್ರಧಾನಿ ನ್ಗುಯೇನ್ ಕ್ಸುವಾನ್ ಫುಕ್ ವಹಿಸಿದ್ದು, ಎಲ್ಲಾ ಪೂರ್ವ ಏಷ್ಯಾ ಶೃಂಗರಾಷ್ಟ್ರಗಳು ಭಾಗವಹಿಸಿದ್ದವು.

    ಭಯೋತ್ಪಾದನೆ, ಹವಾಮಾನ ಬದಲಾವಣೆ ಮತ್ತು ಸಾಂಕ್ರಾಮಿಕ ರೋಗಗಳಂತಹ ರಾಷ್ಟ್ರೀಯ ಗಡಿಗಳನ್ನು ಮೀರಿಸುವ ಸವಾಲುಗಳನ್ನು ಎದುರಿಸಲು ಕೋವಿಡ್ ಪಿಡುಗು ಕಡಿಮೆಯಾದ ನಂತರದ ಜಗತ್ತಿನಲ್ಲಿ ಹೆಚ್ಚಿನ ಅಂತರರಾಷ್ಟ್ರೀಯ ಸಹಕಾರದ ಅವಶ್ಯಕತೆಯಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

      ಏಷ್ಯಾ-ಫೆಸಿಫಿಕ್ ಪ್ರದೇಶದಲ್ಲಿ ಪೂರ್ವ ಏಷ್ಯಾ ಶೃಂಗ ಪ್ರಮುಖ ವೇದಿಕೆಯಾಗಿದ್ದು ಭದ್ರತೆ ಮತ್ತು ರಕ್ಷಣಾ ವಿಷಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಕೆಲಸ ಮಾಡುತ್ತದೆ. ಈಸ್ಟ್ ಏಷ್ಯಾ ಸಮ್ಮಿತ್ ನಲ್ಲಿ ಭಾರತ, ಚೀನಾ, ಜಪಾನ್, ಕೊರಿಯಾ ಗಣತಂತ್ರ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಅಮೆರಿಕ ಮತ್ತು ರಷ್ಯಾ ಸದಸ್ಯ ರಾಷ್ಟ್ರಗಳಾಗಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries