HEALTH TIPS

ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ವಿಧಿವಶ

        ಕೋಲ್ಕತಾ: ಕಳೆದೊಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಬಂಗಾಳಿ ನಟ ಸೌಮಿತ್ರಾ ಚಟರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ವಿಧಿವಶರಾಗಿದ್ದಾರೆ. 

     85 ವರ್ಷದ ಸೌಮಿತ್ರ ಚಟರ್ಜಿಯವರು ಸ್ಪಂದಿಸುತ್ತಿಲ್ಲ ಮತ್ತು ಒಂದಕ್ಕಿಂತ ಹೆಚ್ಚು ಲೈಫ್ ಸಪೆÇೀರ್ಟ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಪವಾಡ ನಡೆಯದ ಹೊರತು ನಾವು ಏನೂ ಹೇಳಲು ಸಾಧ್ಯವಿಲ್ಲ ಎಂದು ನಿನ್ನೆಯಷ್ಟೇ ವೈದ್ಯರು ತಿಳಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸೌಮಿತ್ರ ಚಟರ್ಜಿಯವರು ಆಸ್ಪತ್ರೆಯಲ್ಲಿ ಕೊನೆಯುಸೆರೆಳೆದಿದ್ದಾರೆಂದು ವರದಿಗಳು ತಿಳಿಸಿವೆ. 

       ಕ್ಯಾನ್ಸರ್ ನಿಂದ ಬಳಲುತ್ತಿರುವ ಸೌಮಿತ್ರ ಚಟರ್ಜಿ ಅವರಿಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ,  ಅವರ  ಆರೋಗ್ಯದಲ್ಲಿ  ಮತ್ತಷ್ಟು ಏರಿಳಿತ ಉಂಟಾಗಿತ್ತು, ಅವರ ಆರೋಗ್ಯದಲ್ಲಿ ಮತ್ತಷ್ಟು ವಿಷಮವಾಗಿದ್ದರಿಂದ ಅವರನ್ನು ಐಸಿಯುಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries