HEALTH TIPS

ಅರ್ನಾಬ್ ಗೋಸ್ವಾಮಿ ಮತ್ತಿಬ್ಬರಿಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು

           ನವದೆಹಲಿ: ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

          2018ರ  ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

        ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.  ಅಷ್ಟು ಮಾತ್ರವಲ್ಲದೆ ಆದೇಶವನ್ನು ತಕ್ಷಣವೇ ಪಾಲಿಸುವಂತೆ ನೋಡಿಕೊಳ್ಳುವಂತೆ ಅದು ಪೆÇಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿತು.

          ಪ್ರಕರಣದಲ್ಲಿ ಗೋಸ್ವಾಮಿ ಹಾಗೂ ಇನ್ನಿಬ್ಬರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದ್ದರಿಂ ಮತ್ತು ಅದಕ್ಕಾಗಿ ಕೆಳನ್ಯಾಯಾಲಯಕ್ಕೆ ತೆರಳುವಂತೆ ಕೋರಿದ್ದರಿಂದ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

         ಒಬ್ಬರು ಆತ್ಮಹತ್ಯೆ ಮಾಡಿಕೊಂಡರೆಂದು ರಾಷ್ಟ್ರೀಯ ಮಾಧ್ಯಮ ವಕ್ತಾರರನ್ನು ಬಲಿಯಾಗಿಸುವುದು ಸರಿಯಲ್ಲ. ಜೊತೆಗೆ ಸರಿಯಾದ ಮಾನದಂಡ, ಸಾಕ್ಷ್ಯಗಳಿಲ್ಲದೆ ವ್ಯಕ್ತಿಗಳನ್ನು ಬಂಧಿಸುವುದು ನ್ಯಾಯಯುತವಲ್ಲ. ಹೈಕೋರ್ಟ್‍ಗಳು ಇತ್ತೀಚೆಗೆ ಎಸಗುವ ಇಂತಹ ಪೂರ್ವಾಗ್ರಹ ಪೀಡಿತ ನ್ಯಾಯ ತೀರ್ಮಾನದ ವಿರುದ್ದ ಸರ್ವೋಚ್ಚ ನ್ಯಾಯಾಲಯ ಇನ್ನು ಸುಮ್ಮನಿರದು ಎಂದು ಎಚ್ಚರಿಕೆಯನ್ನು ಚಂದ್ರಚೂಡ್ ನಿಡಿದ್ದು ವಿಶೇಷವಾಗಿತ್ತು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries