HEALTH TIPS

ಕೊಂಡೆವೂರು ಯೋಗಾಶ್ರಮದಿಂದ ಡಯಾಲಿಸಿಸ್ ಘಟಕಕಕ್ಕೆ ಉಚಿತ ಕೊಡುಗೆ

     ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಡಯಾಲಿಸಿಸ್ ಘಟಕಕ್ಕೆ ಅಗತ್ಯವಿರುವ ಬೆಡ್‍ಶೀಟ್ , ತಲೆದಿಂಬು ಕವಚಗಳನ್ನು ಪರಮಪೂಜ್ಯ ಶ್ರೀಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವಿಶ್ವಸ್ಥರಲ್ಲಿ ಓರ್ವರಾದ ಶಶಿಧರ ಶೆಟ್ಟಿ ಗ್ರಾಮಚಾವಡಿ ಅವರ ಮೂಲಕ ಭಾನುವಾರ ಆಶ್ರಮದ ಗಾಯತ್ರೀ ಮಂಟಪದಲ್ಲಿ ಆಶ್ರಮದ ಕಾರ್ಯಕರ್ತರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

      ಈ ಸಂದರ್ಭದಲ್ಲಿ ಮಂಜೇಶ್ವರ ಬ್ಲಾ.ಪಂ.ಅಧ್ಯಕ್ಷ ಎ.ಕೆ.ಎಂ.ಅಶ್ರಫ್, ಮಂಗಲ್ಪಾಡಿ ಗ್ರಾ.ಪಂ.ಸ್ಥಾಯೀ ಸಮಿತಿ ಅಧ್ಯಕ್ಷ ಬಿ.ಎಂ.  ಮುಸ್ತಫಾ, ಸಾಮಾಜಿಕ ಕಾರ್ಯಕರ್ತರಾದ ರೈಶಾದ್ ಉಪ್ಪಳ, ಚೆಮ್ಮಿ ಪಂಜಾರ, ಅಬ್ದುಲ್ಲ  ಮೊದಲಾದವರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries