HEALTH TIPS

Covid-19 India Update| 24 ಗಂಟೆಯಲ್ಲಿ 38,772 ಪ್ರಕರಣ ಪತ್ತೆ, ಶಾಸಕಿ ಸಹಿತ 443 ಸಾವು

          ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,772 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 443 ಸಾವು ಸಂಭವಿಸಿದೆ.


       ಈ ಹೊಸ ಪ್ರಕರಣಗಳೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ ಸೋಮವಾರಕ್ಕೆ 94,31,692ಕ್ಕೆ ಏರಿಕೆಯಾಗಿದ್ದರೆ, ಒಟ್ಟು ಸಾವಿನ ಸಂಖ್ಯೆ 1,37,139ಕ್ಕೆ ತಲುಪಿದೆ.

       ಸದ್ಯ ದೇಶದಲ್ಲಿ 4,46,952 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 45,333 ಮಂದಿ ಚೇತರಿಕೆ ಕಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಈ ವರೆಗೆ 88,47,600 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

       ಭಾನುವಾರ ಒಂದೇ ದಿನ ದೇಶದಲ್ಲಿ 8,76,173 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವರೆಗೆ 14,03,79,97 6ಮಾದರಿಗಳನ್ನು ಪರೀಕ್ಷೆ ಮಾಡಿರುವುದಾಗಿ ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ತೆ (ಐಸಿಎಂಆರ್‌) ತಿಳಿಸಿದೆ.

                    ಜೈಪುರ ಬಿಜೆಪಿ ಶಾಸಕಿ ಕೋವಿಡ್‌ನಿಂದ ಸಾವು

     ರಾಜಸ್ಥಾನದ ರಾಜ್‌ಸಮಂದ್‌ ಕ್ಷೇತ್ರದ ಬಿಜೆಪಿ ಶಾಸಕಿ ಕಿರಣ್‌ ಮಹೇಶ್ವರಿ ಅವರು ಕೊರೊನಾ ವೈರಸ್‌ ಸೊಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಅವರು ಸೋಮವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries