HEALTH TIPS

ಮಗುವಿನ ಶಿಕ್ಷಣಕ್ಕೆ ಪ್ರತಿ ತಿಂಗಳು ₹2,000 ನೀಡಲು ರಾಜ್ಯಗಳಿಗೆ 'ಸುಪ್ರೀಂ' ಸೂಚನೆ

          ನವದೆಹಲಿ: ಕೋವಿಡ್‌-19 ಪಿಡುಗಿನ ಸಂದರ್ಭದಲ್ಲಿ ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಇದ್ದು (ಸಿಸಿಐ), ಈಗ ಅವರ ಪಾಲಕರೊಂದಿಗಿರುವ ಪ್ರತಿ ಮಗುವಿನ ಶಿಕ್ಷಣಕ್ಕೆ ಪ್ರತಿ ತಿಂಗಳು ₹ 2,000 ನೀಡುವಂತೆ ಸುಪ್ರೀಂಕೋರ್ಟ್‌ ಎಲ್ಲ ರಾಜ್ಯಗಳಿಗೆ ಮಂಗಳವಾರ ಸೂಚನೆ ನೀಡಿದೆ.

         ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಶಿಫಾರಸಿನಂತೆ ಕೆಲವು ಮಕ್ಕಳು ಈಗಲೂ ಈ ಪಾಲನಾ ಕೇಂದ್ರಗಳಲ್ಲಿ ಇದ್ದಾರೆ. ಈ ಮಕ್ಕಳಿಗಾಗಿ ಆನ್‌ಲೈನ್‌ ತರಗತಿಗಳನ್ನು ನಡೆಸುವ ಸಲುವಾಗಿ ಪಾಲನಾ ಕೇಂದ್ರಗಳಿಗೆ ಪುಸ್ತಕ, ಸ್ಠೇಷನರಿ ಸಾಮಗ್ರಿ ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು 30 ದಿನಗಳ ಒಳಗಾಗಿ ಒದಗಿಸುವಂತೆಯೂ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರರಾವ್‌, ಹೇಮಂತ್ ಗುಪ್ತ ಹಾಗೂ ಅಜಯ್‌ ರಸ್ತೋಗಿ ಅವರಿರುವ ನ್ಯಾಯಪೀಠ ಈ ವಿಷಯಕ್ಕೆ ಸಂಬಂಧಿಸಿ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ವೇಳೆ ಈ ನಿರ್ದೇಶನ ನೀಡಿತು.

ಈ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ಗೆ ನೆರವು ನೀಡುತ್ತಿರುವ ವಕೀಲ ಗೌರವ್ ಅಗ್ರವಾಲ್‌ ಅವರು, ಮಕ್ಕಳ ಪಾಲನಾ ಕೇಂದ್ರಗಳಿಗೆ ಬಾಲ ನ್ಯಾಯ ಮಂಡಳಿಗಳೂ ನೆರವು ನೀಡಬೇಕು. ಈ ಕೇಂದ್ರಗಳಲ್ಲಿ ಶಿಕ್ಷಕರನ್ನು ಸಹ ನೇಮಕ ಮಾಡಬೇಕು ಎಂದು ತಿಳಿಸಿದರು.

'ಮಕ್ಕಳ ರಕ್ಷಣೆ, ಅವರ ಶಿಕ್ಷಣಕ್ಕೆ ಸಂಬಂಧಿಸಿದ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆಯೇ ಎಂಬುದನ್ನು ಮಕ್ಕಳ ಹಕ್ಕುಗಳ ಆಯೋಗ ಖಾತ್ರಿಪಡಿಸಿಕೊಳ್ಳಬೇಕು' ಎಂದೂ ನ್ಯಾಯಪೀಠ ಹೇಳಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries