HEALTH TIPS

ಡಿ. 31 ರವರೆಗೆ ಮತದಾರರ ಪಟ್ಟಿಗೆ ಸೇರಿಸಲು ಅವಕಾಶ ವಿಸ್ತಣೆ-ಅಂತಿಮ ಪಟ್ಟಿ ಜನವರಿ 20 ರಂದು ಪ್ರಕಟ

                       

        ತಿರುವನಂತಪುರಂ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಈ ತಿಂಗಳ 31 ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ಅವಕಾಶವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮತದಾನದ ಹಕ್ಕನ್ನು ಹೊಂದಿರುವ ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಜಿಲ್ಲೆಗಳಲ್ಲಿ ಸಮಗ್ರ ಅಭಿಯಾನವನ್ನು ಆಯೋಜಿಸಲಾಗುವುದು.

         ಸೆಕ್ರಟರಿಯೇಟ್ ನಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ರಾಜಕೀಯ ಪಕ್ಷಗಳು ಮತದಾರರ ಪಟ್ಟಿಯಲ್ಲಿ ಅರ್ಹರಾದ ಎಲ್ಲರನ್ನೂ ಸೇರಿಸಲು ವಿಶೇಷ ಗಮನ ಹರಿಸಬೇಕು ಎಂದು ನವಜೋತ್ ಖೋಸಾ ಹೇಳಿದರು. ವಿಧಾನಸಭಾ ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು 2021ರ  ಜನವರಿ 20 ರಂದು ಪ್ರಕಟಿಸಲಾಗುವುದು. ಡಿಸೆಂಬರ್ 31 ರವರೆಗೆ ಪಟ್ಟಿಗೆ ಹೆಸರುಗಳನ್ನು ಸೇರಿಸಲು ಅವಕಾಶವಿದೆ.

          ಚುನಾವಣಾ ವೀಕ್ಷಕಿ ಶರ್ಮಿಳಾ ಮೇರಿ ಜೋಸೆಫ್ ಮಾತನಾಡಿ, ರಾಜಕೀಯ ಪಕ್ಷಗಳು ಸೇರಿದಂತೆ ಸಂಬಂಧಪಟ್ಟವರು ಅಂತರ್ಜಾಲ ಸೇವೆ ಕಷ್ಟಕರವಾಗಿರುವ ಗ್ರಾಮೀಣ ಪ್ರದೇಶಗಳಲ್ಲಿ ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವೀಡಿಯೋ-ಆಡಿಯೋ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಸಹ ಬಳಸಬೇಕು ಎಂದರು.

          ಮತದಾರರ ಪಟ್ಟಿಗೆ ಸಂಬಂಧಿಸಿದ ತಮ್ಮ ಪ್ರಶ್ನೆಗಳನ್ನು ಪರಿಹರಿಸಲು ಸಾರ್ವಜನಿಕರು 1950 ಮತ್ತು 0471-2731122 ಸಂಖ್ಯೆಗಳಿಗೆ ಕರೆ ಮಾಡಬಹುದು.  ಸಭೆಯಲ್ಲಿ ಎಡಿಎಂ ವಿ.ಆರ್ ವಿನೋದ್, ಚುನಾವಣಾ ವಿಭಾಗದ ಉಪ ಕಲೆಕ್ಟರ್ ಜಾನ್ ವಿ ಸ್ಯಾಮ್ಯುಯೆಲ್, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries