HEALTH TIPS

ಲಂಡನ್‌ನಿಂದ ದೆಹಲಿಗೆ ಬಂದ ಆರು ಪ್ರಯಾಣಿಕರಿಗೆ ಕೋವಿಡ್‌

          ನವದೆಹಲಿ: ಏರ್‌ ಇಂಡಿಯಾದ ಮೂಲಕ ಲಂಡನ್‌ನಿಂದ ದೆಹಲಿಗೆ ಆಗಮಿಸಿದ ಆರು ಪ್ರಯಾಣಿಕರಲ್ಲಿ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು.

       ಏರ್‌ ಇಂಡಿಯಾ ವಿಮಾನವು ಸೋಮವಾರ ರಾತ್ರಿ 11 ಗಂಟೆಗೆ ಲಂಡನ್‌ನಿಂದ ದೆಹಲಿಗೆ ಆಗಮಿಸಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಕೊರೊನಾ ಪರೀಕ್ಷೆ ನಡೆಸಿದಾಗ ಐವರಿಗೆ ಸೋಂಕು ತಗುಲಿರುವುದು ತಿಳಿದುಬಂದಿದೆ. ಇನ್ನೊಬ್ಬ ಪ್ರಯಾಣಿಕ ಲಂಡನ್‌ನಿಂದ ದೆಹಲಿಗೆ ಆಗಮಿಸಿ, ಬಳಿಕ ಚೆನ್ನೈಗೆ ಪ್ರಯಣಿಸಿದ್ದಾನೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ ಎಂದು ಅವರು ತಿಳಿಸಿದರು.

     'ಈ ಹಿನ್ನೆಲೆಯಲ್ಲಿ ಡಿಸೆಂಬರ್‌ 23 ರಿಂದ 31 ತನಕ ಇಂಗ್ಲೆಂಡ್‌ ಮತ್ತು ಭಾರತದ ನಡುವಿನ ಎಲ್ಲಾ ವಿಮಾನ ಸೇವೆಗಳನ್ನು ರದ್ದು ಮಾಡಲಾಗಿದೆ. ಅಲ್ಲದೆ ಸೋಮವಾರ ಮತ್ತು ಮಂಗಳವಾರ ಬ್ರಿಟನ್‌ನಿಂದ ಭಾರತಕ್ಕೆ ಆಗಮಿಸುವ ಎಲ್ಲರೂ ವಿಮಾನ ನಿಲ್ದಾಣದಲ್ಲಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಗಾಗಬೇಕು' ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries