HEALTH TIPS

ನೂತನ ಸಂಸತ್‌ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ

         ನವದೆಹಲಿ: ಸಂಸತ್‌ನ ನೂತನ ಕಟ್ಟಡಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

         ಸಂಪುಟದ ಸಚಿವರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಹಲವು ದೇಶಗಳ ರಾಯಭಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

      ಮೋದಿ ಅವರು ಕಟ್ಟಡ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆಯನ್ನೂ ನೆರವೇರಿಸಿದರು. ಶೃಂಗೇರಿ ಮಠದ ಪುರೋಹಿತರು ಭೂಮಿಪೂಜೆಗೆ ಸಂಬಂಧಿಸಿದ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು.

       900 ರಿಂದ 1200 ಸಂಸತ್ ಸದಸ್ಯರು ಕುಳಿತುಕೊಳ್ಳುವಂತಹ ಸಾಮರ್ಥ್ಯವಿರುವ ಈ ಭವನದ ಒಟ್ಟು ವಿಸ್ತೀರ್ಣ 64,500 ಚದರ ಮೀಟರ್‌. ₹971 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸಂಸತ್‌ ಭವನದ ನಿರ್ಮಾಣ ಕಾರ್ಯ 2022ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

          ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್‌ ಈ ಭವನ ನಿರ್ಮಾಣದ ಗುತ್ತಿಗೆ ಪಡೆದುಕೊಂಡಿದೆ.ದೇಶದ ‍ಪ್ರಜಾಪ್ರಭುತ್ವ ವ್ಯವಸ್ಥೆಯ ಪರಂಪರೆಯನ್ನು ಸಾರುವ 'ಸಂವಿಧಾನ ಸಭಾಂಗಣ', ಸಂಸದರಿಗಾಗಿ ವಿಶ್ರಾಂತಿ ಕೋಣೆ, ಗ್ರಂಥಾಲಯ, ವಿವಿಧ ಸಮಿತಿಗಳು ಸಭೆ ನಡೆಸಲು ಕೊಠಡಿಗಳು, ಭೋಜನಶಾಲೆ ಹಾಗೂ ವಿಶಾಲ ಪಾರ್ಕಿಂಗ್‌ ಸ್ಥಳವನ್ನು ಈ ನೂತನ ಕಟ್ಟಡ ಹೊಂದಿರಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries