ಕಾಸರಗೋಡು: ಕಾಸರಗೋಡು ನಗರದ ಹೊನ್ನೆಮೂಲೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿವರ್ಯ ಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರ ಕಾರ್ಮಿಕತ್ವದಲ್ಲಿ ಗರ್ಭನ್ಯಾಸ, ಗರ್ಭಗುಡಿಯ ದಾರಂದ ಮುಹೂರ್ತ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ.ಅನಂತ ಕಾಮತ್, ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಗೋಪಾಲ, ಕಾರ್ಯಾಧ್ಯಕ್ಷ ವೆಂಕಟ್ರಮಣ ಹೊಳ್ಳ, ಕಾರ್ಯದರ್ಶಿ ರೋಹಿತಾಕ್ಷ ನಾಗರಕಟ್ಟೆ, ಭಕ್ತಾದಿಗಳು ಉಪಸ್ಥಿತರಿದ್ದರು.





