ನವದೆಹಲಿ: ಮುಖ್ಯ ಚುನಾವಣಾ ಆಯೋಗ ಇಂದು (ಜ 25) 11ನೇ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತಿದ್ದು, 'ಮತದಾರರನ್ನು ಸಬಲೀಕರಣಗೊಳಿಸುವುದು, ಜಾಗರೂಕತೆ, ಸುರಕ್ಷಿತ ಮತ್ತು ಮಾಹಿತಿ ನೀಡುವುದು' ಈ ವರ್ಷದ ದಿನಾಚರಣೆಯ ಘೋಷವಾಕ್ಯವಾಗಿದೆ.
ಚುನಾವಣಾ ಆಯೋಗ ಆಯೋಜಿಸುತ್ತಿರುವ ರಾಷ್ಟ್ರಮಟ್ಟದ ಪ್ರಮುಖ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ನವದೆಹಲಿಯ ಅಶೋಕ್ ಹೋಟೆಲ್‍ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ಭವನದಿಂದ ರಾಷ್ಟ್ರಪತಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ,ದೂರ ಸಂಪರ್ಕ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿರುತ್ತಾರೆ.


