HEALTH TIPS

ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರದಿಂದ 12,351.5 ಕೋಟಿ ರೂ. ಅನುದಾನ

          ನವದೆಹಲಿ: ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ(ಆರ್‍ಎಲ್‍ಬಿ) ಅನುದಾನ ಒದಗಿಸುವುದಕ್ಕಾಗಿ ಕೇಂದ್ರ ಸರ್ಕಾರ 18 ರಾಜ್ಯಗಳಿಗೆ 12,351.5 ಕೋಟಿ ರೂ ಬಿಡುಗಡೆ ಮಾಡಿದೆ. ಈ ಮೊತ್ತ 2020-21ರ ಹಣಕಾಸು ವರ್ಷದಲ್ಲಿ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯಿಂದ ಬಿಡುಗಡೆಯಾದ ಮೂಲ ಅನುದಾನದ ಎರಡನೇ ಕಂತಾಗಿದೆ.

         ಮೊದಲ ಕಂತಿಗೆ ಬಳಕೆ ಪ್ರಮಾಣ ಪತ್ರ ನೀಡಿದ 18 ರಾಜ್ಯಗಳಿಗೆ ಮತ್ತು ಪಂಚಾಯತಿ ರಾಜ್ ಸಚಿವಾಲಯದ ಶಿಫಾರಸಿನ ಮೇರೆಗೆ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.ಸಮುದಾಯ ಸ್ವತ್ತುಗಳನ್ನು ರಚಿಸಲು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಆರ್ಥಿಕ ಕಾರ್ಯಸಾಧ್ಯತೆಯನ್ನು ಸುಧಾರಿಸಲು 15ನೇ ಹಣಕಾಸು ಆಯೋಗದ ಶಿಫಾರಸುಗಳಂತೆ ಅನುದಾನವನ್ನು ಬಿಡುಗಡೆ ಮಾಡಲಾಗುತ್ತದೆ.

ಗ್ರಾಮಗಳು, ತಾಲ್ಲೂಕುಗಳು ಮತ್ತು ಜಿಲ್ಲಾ ಮಟ್ಟದ ಮೂರು ಸ್ತರಗಳಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಲು ಅನುವು ಮಾಡಿಕೊಡಲು ಈ ಅನುದಾನ ಬಿಡುಗಡೆ ಮಾಡಲಾಗುತ್ತದೆ.

       15ನೇ ಹಣಕಾಸು ಆಯೋಗ ಈ ಸಂಸ್ಥೆಗಳಿಗೆ ಎರಡು ರೀತಿಯ ಅನುದಾನ ಶಿಫಾರಸು ಮಾಡಿದೆ. ಈ ಮುನ್ನ, 14 ನೇ ಹಣಕಾಸು ಆಯೋಗ 2020ರ ಜೂನ್‍ನಲ್ಲಿ ಎಲ್ಲಾ ರಾಜ್ಯಗಳ ಸ್ಥಳೀಯ ಸಂಸ್ಥೆಗಳಿಗೆ 18,199 ಕೋಟಿ ರೂ. ಬಿಡುಗಡೆ ಮಾಡಿತ್ತು. ನಂತರ ಒಂದನೇ ನೇ ಕಂತಿನ ಅನುದಾನವಾದ 15,187.50 ಕೋಟಿ ರೂ. ಹಣವನ್ನು ಸಹ ಎಲ್ಲಾ ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries