HEALTH TIPS

4ನೇ ಟೆಸ್ಟ್: ರಿಷಬ್ ಪಂತ್ ಅಬ್ಬರ, ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ರೋಚಕ ಜಯ, ಸರಣಿ ಕೈವಶ

      ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ದದ 4ನೇ ಮತ್ತು ಅಂತಿಮ ಟೆಸ್ಟ್ ನಲ್ಲಿ ಪ್ರವಾಸಿ ಭಾರತ ತಂಡ ಪ್ರಬಲ ಆಸ್ಟ್ರೇಲಿಯಾ ತಂಡವನ್ನು 3 ವಿಕೆಟ್ ಗಳ ಅಂತರದಲ್ಲಿ ಮಣಿಸಿ ಟೆಸ್ಟ್ ಸರಣಿಯನ್ನು ಕೈ ವಶ ಮಾಡಿಕೊಂಡಿದೆ.

      ಬ್ರಿಸ್ಬೇನ್ ನ ಗಬ್ಬಾ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 3 ವಿಕೆಟ್‌ಗಳ ಅಂತರದಲ್ಲಿ ಮಣಿಸುವ ಮೂಲಕ ಭಾರತ ತಂಡ 4 ಪಂದ್ಯಗಳ ಟೆಸ್ಟ್ ಸರಣಿಯನ್ನು 2–1 ಅಂತರದಿಂದ ಕೈ ವಶ ಮಾಡಿಕೊಂಡಿದೆ. ಆಸ್ಟ್ರೇಲಿಯಾ ನೀಡಿದ್ದ ಸವಾಲಿನ ಗುರಿಯನ್ನು ಭಾರತ ತಂಡ 7 ವಿಕೆಟ್ ಕಳೆದುಕೊಂಡು ಮೆಟ್ಟಿ ನಿಂತು ಗೆದ್ದು ಬೀಗಿತು. 

      ಅಂತಿಮ ದಿನವಾದ ಇಂದು ಆರಂಭದಲ್ಲೇ ಭಾರತ ಆಘಾತ ಎದುರಿಸಿತು. ರೋಹಿತ್ ಶರ್ಮಾ ಕೇವಲ 7 ರನ್ ಗಳಿಸಿ ಔಟ್ ಆದರು. ಬಳಿಕ ಜೊತೆಗೂಡಿದ ಗಿಲ್ ಮತ್ತು ಪೂಜಾರ ಜೋಡಿ ಶತಕದ ಜೊತೆಯಾಡುವ ಮೂಲಕ ಭಾರತದ ಇನ್ನಿಂಗ್ಸ್ ಗೆ ಬಲ ತಂದರು. ಈ ಹಂತದಲ್ಲಿ 91 ರನ್ ಗಳಿಸಿ ಶತಕದಂಚಿನಲ್ಲಿದ್ದ ಗಿಲ್ ಲೈಯಾನ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ರಹಾನೆ (24 ರನ್), ಪೂಜಾರ (56 ರನ್), ಮಯಾಂಕ್ ಅಗರ್ವಾಲ್ (9 ರನ್) ಔಟ್ ಆದರು. ಈ ವೇಳೆ ಪಂದ್ಯ ಡ್ರಾ ಆಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಕ್ರೀಸ್ ಗೆ ಬಂದ ರಿಷಬ್ ಪಂತ್ 138 ಎಸೆತಗಳಲ್ಲಿ ಅಜೇಯ 89 ರನ್ ಗಳಿಸಿ ಭಾರತವನ್ನು ಗೆಲುವಿನ ದಡ ಸೇರಿಸಿದರು. ಪಂತ್ ಗೆ ವಾಷಿಂಗ್ಟನ್ ಸುಂದರ್ (22 ರನ್) ಅಂತಿಮ ಹಂತದಲ್ಲಿ ಉತ್ತಮ ಸಾಥ್ ನೀಡಿದರು.

      ಆ ಮೂಲಕ ಕಳೆದ ಮೂರು ದಶಕಗಳಿಂದ ಅಬೇಧ್ಯವಾಗಿದ್ದ ಗಾಬಾದಲ್ಲಿ ಆಸ್ಟ್ರೇಲಿಯನ್ನರಿಗೆ ಮರೆಯಲಾಗದ ಸೋಲುಣಿಸಿದೆ.  


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries