HEALTH TIPS

ಹರಿಯಾಣದ ಮೂರು ಜಿಲ್ಲೆಗಳಲ್ಲಿ ಶುಕ್ರವಾರದ ವರೆಗೂ ಇಂಟರ್‌ನೆಟ್ ಸೇವೆ ಕಡಿತ

            ಚಂಡೀಗಡ: ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಹೇರಲಾಗಿರುವ ಇಂಟರ್‌ನೆಟ್ ಸೇವೆ ಕಡಿತವನ್ನು ಶುಕ್ರವಾರದ ವರೆಗೂ ಮುಂದುವರಿಸಲು ಹರಿಯಾಣ ಸರ್ಕಾರ ನಿರ್ಧರಿಸಿದೆ.

            ಹರಿಯಾಣದ ಸೋನಿಪತ್, ಜಾಜ್ಜರ್ ಹಾಗೂ ಪಲ್ವಾಲ್ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆ 5 ಗಂಟೆಯ ವರೆಗೂ ನಿರ್ಬಂಧ ಮುಂದುವರಿಯಲಿದೆ.

      ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವದ ದಿನದಂದು ರೈತರು ರಾಷ್ಟ್ರ ರಾಜಧಾನಿಯಲ್ಲಿ ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಹರಿಯಾಣದ ಗಡಿ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದ್ದು, ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

      ದೆಹಲಿ ಸಮೀಪದ ಹರಿಯಾಣ ಗಡಿ ಭಾಗಗಳಲ್ಲಿ ಉದ್ವಿಗ್ನಪರಿಸ್ಥಿತಿ ಮುಂದುವರಿದಿದ್ದು, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಕಡಿತಗೊಳಿಸಲಾಗಿದೆ ಎಂದು ಹರಿಯಾಣ ಗೃಹ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾಯ್ಸ್ ಕಾಲ್ ಸೌಲಭ್ಯ ಮಾತ್ರ ಲಭ್ಯವಿರಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries