ತಿರುವನಂತಪುರ: ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹತ್ತು ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ.ರಾಜ್ಯ ಚುನಾವಣಾ ಆಯುಕ್ತ ಟೀಕಾರಾಮ್ ಮೀನಾ ಈ ಬಗ್ಗೆ ಗುರುವಾರ ಮಾಹಿತಿ ನೀಡಿದರು.
ವಿಧಾನಸಭಾ ಚುನಾವಣೆಗೆ 5,79,033 ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ. ಪಟ್ಟಿಗೆ ಹೆಸರುಗಳನ್ನು ಸೇರಿಸಲು ಇನ್ನೂ ಅವಕಾಶವಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ 2.67 ಕೋಟಿ ಮತದಾರರಿದ್ದಾರೆ. 1.56 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ.
ಮತದಾರರ ಪಟ್ಟಿಯಲ್ಲಿ 221 ಮಂದಿ ದ್ವಿಲಿಂಗಿಗಳು ಇದ್ದಾರೆ ಎಂದು ಟೀಕಾರಾಮ್ ಮೀನಾ ಸ್ಪಷ್ಟಪಡಿಸಿದರು.


