HEALTH TIPS

ಸೋಲಾರ್ ಹಗರಣ ಸಿಬಿಐ ತನಿಖೆಗೆ ನೀಡಲು ಕೇರಳ ಸರ್ಕಾರ ನಿರ್ಧಾರ

      ತಿರುವನಂತಪುರ: ಕೇರಳ ಸರ್ಕಾರಕ್ಕೆ ತೀವ್ರ ಮುಜುಗರ ತಂದಿಟ್ಟಿದ್ದ ಸೋಲಾರ್ ಹಗರಣವನ್ನು ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಸಿಬಿಐ ತನಿಖೆಗೆ ನೀಡಲು ನಿರ್ಧರಿಸಿದೆ.

      ಕೇರಳ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಕೇರಳ ಸರ್ಕಾರ ಸೋಲಾರ್ ಹಗರಣವನ್ನು ಸಿಬಿಐಗೆ ಹಸ್ತಾಂತರಿಸಲು ನಿರ್ಧರಿಸಿದೆ.  ಕೇರಳದ ವಿಪಕ್ಷ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ನಾಯಕರಾದ ಮಾಜಿ ಸಿಎಂ ಉಮ್ಮನ್ ಚಾಂಡಿ, ಕೆ.ಸಿ.ವೇಣುಗೋಪಾಲ್, ಎಪಿ ಅನಿಲ್ ಕುಮಾರ್ ಮತ್ತು ಅಡೂರ್ ಪ್ರಕಾಶ್ ಮತ್ತು ಹಿಬಿ ಈಡನ್ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಪಿ ಅಬ್ದುಲ್ಲಾ ಕುಟ್ಟಿ ಸೇರಿದಂತೆ  ಹಲವು ನಾಯಕರ ಹೆಸರು ಹಗರಣದಲ್ಲಿ ಕೇಳಿಬಂದಿತ್ತು. 

           ಏನಿದು ಪ್ರಕರಣ?
    2003 ರಲ್ಲಿ ಟೀಮ್ ಸೋಲಾರ್ ಎಂಬ ಹೆಸರಿನ ನಕಲಿ ಕಂಪನಿ ಇಬ್ಬರು ಮಹಿಳೆಯರನ್ನು ಬಳಸಿಕೊಂಡು ಕೇರಳ ರಾಜ್ಯದಲ್ಲಿ ಸೌರ ವಿದ್ಯುತ್ ಘಟಕಗಳ ಸ್ಥಾಪನೆಗೆ ಮುಂದಾಗಿತ್ತು. ಈ ಮಹಿಳೆಯರು ಅಂದಿನ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಆಪ್ತ ಸಿಬ್ಬಂದಿ ಜತೆ ಸಂಪರ್ಕ ಸಾಧಿಸಿ, 70 ಮಿಲಿಯನ್ ಮೊತ್ತದ ಯೋಜನೆ ಅನುಷ್ಠಾನಗೊಳಿಸಲು ಮುಂದಾಗಿದ್ದರು. ಈ ನಕಲಿ ಕಂಪನಿಯ ನಿರ್ದೇಶಕರಾಗಿದ್ದ ಬಿಜು ರಾಧಾಕೃಷ್ಣನ್ ಹಾಗೂ ಸರಿತಾ ನಾಯರ್ ಸಾವಿರಾರು ಹೂಡಿಕೆದಾರರಿಂದ ಹಣ ಸಂಗ್ರಹಿಸಿ, ಪಾಲುದಾರಿಕೆ ಆಮಿಷ ಒಡ್ಡಿದ್ದರು. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಚಾಂಡಿ ಅವರ ಆಪ್ತ ಟೆನ್ನಿ ಎಂಬಾತನನ್ನು ಬಂಧಿಸಲಾಗಿತ್ತು.

      ಪೆರುಂಬವೂರ್ ನಿವಾಸಿ ಸಜ್ಜದ್ ಎನ್ನುವವರು ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದರು. ಮಾಜಿ ಸಿಎಂ ಉಮ್ಮನ್ ಚಾಂಡಿಗೆ ಸರಿತಾ ಮತ್ತು ರಾದಾಕೃಷ್ಣನ್ ಪರಮಾಪ್ತರೆನ್ನುವ ವಿಚಾರ ರಾಜಕೀಯ ಮಹತ್ವವನ್ನು ಪಡೆದಿತ್ತು.  ಹಗರಣದ ಆರೋಪಿಗಳಾಗಿದ್ದ ಸರಿತಾ ಎಸ್ ನಾಯರ್ ಮತ್ತು ಬಿಜು ರಾಧಾಕೃಷ್ಣರಿಗೆ ಜಿಲ್ಲಾ ನ್ಯಾಯಾಲಯ 3 ವರ್ಷ ಜೈಲುಶಿಕ್ಷೆ, 10 ಸಾವಿರ ದಂಡವನ್ನು ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟಿ ಶಾಲೂ ಮೆನನ್‌ ಮತ್ತು ಆಕೆಯ ತಾಯಿಯನ್ನು ಖುಲಾಸೆಗೊಳಿಸಲಾಗಿದೆ.

       ಸರಿತಾ ನಾಯರ್ ಗೆ ಲೈಂಗಿಕ ಕಿರುಕುಳ
      ಸಚಿವರಾದ ಶಿಬು ಬೇಬಿ ಜಾನ್ ಮತ್ತು ಎ.ಪಿ.ಅನಿಲ್ ಕುಮಾರ,ಕಾಂಗ್ರೆಸ್ ಶಾಸಕರಾದ ಹೈಬಿ ಎಡೆನ್ ಮತ್ತು ಎ.ಪಿ.ಅಬ್ದುಲ್ಲಾ ಕುಟ್ಟಿ, ಕಾಂಗ್ರೆಸ್ ನಾಯಕ ಆರ್ಯದನ್ ಶೌಕತ್ತು ಮತ್ತು ಅನಿಲ್ ಕುಮಾರರ ಆಪ್ತ ಕಾರ್ಯದರ್ಶಿಗಳು ಹಗರಣದ ಪ್ರಮುಖ ಅಪರಾಧಿ ಸರಿತಾ ನಾಯರ್‌ ರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು ಎಂದು ಬಿಜು ಆರೋಪಿಸಿದ್ದರು. ಇದೂ ಕೂಡ ಭಾರಿ ಸುದ್ದಿಗೆ ಗ್ರಾಸವಾಗಿತ್ತು.

      ಕೇಂದ್ರ ಸರ್ಕಾರದ ಅಂಗಳದಲ್ಲಿ ಚೆಂಡು
       ಹಗರಣವನ್ನು ಸಿಬಿಐಗೆ ವಹಿಸುವ ಕೇರಳ ಸರ್ಕಾದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂಬುದು ಕುತೂಹಲ ಕೆರಳಿಸಿದೆ. ಏಕೆಂದರೆ ಹಗರಣದಲ್ಲಿ ಕೇಳಿಬಂದಿರುವ ಆರೋಪಿಗಳ ಪಟ್ಟಿಯಲ್ಲಿ ಕೇರಳ ಬಿಜೆಪಿ ನಾಯಕರ ಹೆಸರೂ ಕೂಡ ಇದೆ.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries